Advertisement
ಬುಧವಾರ ವಿಧಾನಸಭೆಯಲ್ಲಿ ಕಬ್ಬು ಬೆಳೆಗಾರರು ಹಾಗೂ ಮೆಕ್ಕೆಜೋಳ ಬೆಳೆದ ರೈತರ ಸಮಸ್ಯೆಗಳ ಬಗ್ಗೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 74.24 ಕೋಟಿ ರೂ. ಬಾಕಿ ನೀಡಬೇಕಿದೆ. ಸಚಿವ ರಮೇಶ್ ಜಾರಕಿ ಹೊಳಿ ಅವರ ಮಾಲೀಕತ್ವದ ಕಾರ್ಖಾನೆಯೂ ಬಾಕಿ ಉಳಿಸಿ ಕೊಂಡಿದೆ ಎಂದು ರೈತರು ಆರೋಪಿಸಿದ್ದಾರೆ.ತಕ್ಷಣ ಬಾಕಿ ಪಾವತಿಗೆ ಸೂಚಿಸಬೇಕು ಎಂದು ಆಗ್ರಹಿಸಿದರು.
ಒತ್ತಾಯಿಸಿದರು. ಅಲ್ಲದೆ, ಇಂತಹ ಸಂದರ್ಭದಲ್ಲಿ ಆವರ್ತ ನಿಧಿ ಮೂಲಕ ಹಣ ಬಿಡುಗಡೆ ಮಾಡಿ ರೈತರ ನೆರವಿಗೆ ಧಾವಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದರು. ರೈತರು ಕಬ್ಬು ಬೆಳೆಯುವುದನ್ನೇ ಬಿಟ್ಟಿದ್ದಾರೆ: ಬಿಜೆಪಿ ಸದಸ್ಯ ಗೋವಿಂದ ಕಾರಜೋಳ ಮಾತನಾಡಿ, ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಕಬ್ಬು ಬೆಳೆಯುವ ಪ್ರದೇಶ ಕ್ರಮೇಣ ಕಡಿಮೆಯಾಗುತ್ತಿದೆ. ಸೂಕ್ತ ಬೆಲೆ ಇಲ್ಲದೆ ರೈತರು ಕಬ್ಬು ಬೆಳೆಯುವುದನ್ನೇ ಬಿಟ್ಟಿದ್ದಾರೆ ಎಂದು ಹೇಳಿದರು. ರಿಕವರಿ ವಿಚಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಶೇ.13.5 ರಿಕವರಿ ಆದರೂ
ಶೇ.9.50 ರಿಂದ ಶೇ.10 ಮಾತ್ರ ತೋರಿಸಲಾಗುತ್ತಿದೆ. ಇದು ಮಹಾಮೋಸ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಗುಜರಾತ್‌ನಲ್ಲಿ ಶೇ.11 ರಿಕವರಿ ಇದ್ದರೂ 4200 ರೂ. ನಿಂದ 4300 ರೂ.ವರೆಗೆ ನೀಡಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.9 ರಿಕವರಿ ಇದ್ದರೂ 3250 ರೂ. ದರ ನಿಗದಿ ಮಾಡಲಾಗಿದೆ. ಆದರೆ, ನಮ್ಮಲ್ಲಿ ತೀರಾ ಕಡಿಮೆ ಯಾಕೆ ಎಂದರು.
Related Articles
ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ಮಳೆ ಆಧಾರಿತ ಜಮೀನು ಜತೆಗೆ ತರಿ ಜಮೀನುಗಳಲ್ಲಿ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ 30 ಸಾವಿರ ಎಕರೆ ತರಿ ಜಮೀನಿನಲ್ಲಿ ಮೆಕ್ಕೆಜೋಳ ಬೆಳೆಯಲಾಗಿದ್ದು, ಬೆಳೆಗೆ ರೋಗ ತಗುಲಿ ರೈತರು ಕಂಗಾಲಾಗಿದ್ದಾರೆ. ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ತಕ್ಷಣ ಖರೀದಿ ಕೇಂದ್ರ ಆರಂಭಿಸಿ ಮೆಕ್ಕೆಜೋಳ ಖರೀದಿಸಬೇಕು. ಕೇಂದ್ರ ಸರ್ಕಾìದ 1425 ರೂ. ಜತೆಗೆ ರಾಜ್ಯ ಸರ್ಕಾರ 400 ರೂ. ಸೇರಿಸಿ ಖರೀದಿಸಬೇಕು ಎಂದು ಒತ್ತಾಯಿಸಿದರು.
Advertisement
ಬಿಜೆಪಿಯ ಲಕ್ಷ್ಮಣ ಸವದಿ, ರೈತಸಂಘದ ಪುಟ್ಟಣ್ಣಯ್ಯ ಮಾತನಾಡಿ, ಕಬ್ಬು ಹಾಗೂ ಮೆಕ್ಕೆಜೋಳ ಬೆಳೆಗಾರರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.