ಮಾಸ್ಕೋ: ಭಾರತದ ಮೇಲೆ ದೊಡ್ಡ ಪ್ರಮಾಣದ ದಾಳಿ ನಡೆಸಲು ಸಂಚು ರೂಪಿಸಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಆತ್ಮಾಹುತಿ ಬಾಂಬರ್ ನನ್ನು ರಷ್ಯಾದ ಫೆಡರಲ್ ಸೆಕ್ಯುರಿಟಿ ಸರ್ವೀಸ್ (ಎಫ್ ಎಸ್ ಬಿ) ಬಂಧಿಸಿರುವುದಾಗಿ ಅಧಿಕಾರಿಗಳು ಸೋಮವಾರ(ಆಗಸ್ಟ್ 22) ತಿಳಿಸಿದ್ದಾರೆ.
ಇದನ್ನೂ ಓದಿ:ದೆಹಲಿ: ಹನುಮಂತನ ವಿಗ್ರಹ, ಅಂಗಡಿಗಳ ಧ್ವಂಸ; ಆರೋಪಿಗಾಗಿ ಹುಡುಕಾಟ
ಆಡಳಿತಾರೂಢ ಉನ್ನತ ಬಿಜೆಪಿ ಮುಖಂಡರನ್ನು ಗುರಿಯಾಗಿರಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಐಸಿಸ್ ಸಂಚು ರೂಪಿಸಿದ್ದು, ಐಸಿಸ್ ಉಗ್ರ ರಷ್ಯಾದಲ್ಲಿ ಸೆರೆಸಿಕ್ಕುವ ಮೂಲಕ ಭಾರೀ ದಾಳಿಯ ಸಂಚು ವಿಫಲಗೊಂಡಂತಾಗಿದೆ.
ರಷ್ಯಾದಲ್ಲಿ ನಿಷೇಧಿತ ಅಂತಾರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಸದಸ್ಯನನ್ನು ಎಫ್ ಎಸ್ ಬಿ ಅಧಿಕಾರಿಗಳು ಬಂಧಿಸಿದ್ದು, ಈತ ಭಾರತದಲ್ಲಿನ ಆಡಳಿತಾರೂಢ ಬಿಜೆಪಿಯ ಉನ್ನತ ಮುಖಂಡರನ್ನು ಗುರಿಯಾಗಿರಿಸಿಕೊಂಡು ಆತ್ಮಹತ್ಯಾ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಬಂಧಿತ ಉಗ್ರನನ್ನು ಐಸಿಸ್ ಭಯೋತ್ಪಾದಕ ಸಂಘಟನೆ ಟರ್ಕಿಯಲ್ಲಿ ಆತ್ಮಹತ್ಯಾ ಬಾಂಬರ್ ಆಗಿ ನೇಮಕ ಮಾಡಿಕೊಂಡಿರುವುದಾಗಿ ವರದಿ ವಿವರಿಸಿದೆ. ಭಯೋತ್ಪಾದಕ ಸಂಘಟನೆಯ ಬಗ್ಗೆ ಮತ್ತು ಸಿದ್ಧಾಂತದ ಬಗ್ಗೆ ಐಸಿಸ್ ವಿವಿಧ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಿದೆ ಎಂದು ವರದಿ ತಿಳಿಸಿದೆ.