Advertisement
ಶೀಘ್ರದಲ್ಲಿಯೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉತ್ತರ ಕೊರಿಯಾಕ್ಕೆ ಭೇಟಿ ನೀಡಿ, ಅಲ್ಲಿನ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಜತೆಗೆ ನಡೆಸಲಿರುವ ಉನ್ನತ ಮಟ್ಟದ ಮಾತುಕತೆ ಮತ್ತು ಸಂಭಾವ್ಯ ಒಪ್ಪಂದಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ತಮ್ಮ ಭೇಟಿಯ ಬಗ್ಗೆ ಮಾತನಾಡಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾರ್ವೋ “ರಷ್ಯಾದ ವೊಸ್ಟೋಚಿನಿ ಕೊಸ್ಮೊಡಾರ್‌ನಲ್ಲಿ ಸೆ.13ರಂದು ಉತ್ತರ ಕೊರಿಯಾ ಮುಖ್ಯಸ್ಥ ಕಿಮ್ ಜಾಂಗ್ ಉನ್ ಅವರು ನಮ್ಮ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಆ ಸಂದರ್ಭದಲ್ಲಿ ಅವರು ಪುಟಿನ್‌ಗೆ ಆಹ್ವಾನ ನೀಡಿದ್ದರು. ಆದರೆ, ಭೇಟಿಯ ದಿನಾಂಕ ನಿಗದಿಯಾಗಿಲ್ಲ. ಎರಡು ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ಒಂದು ನಿರ್ಣಾಯ ಘಟ್ಟಕ್ಕೆ ತಲುಪಿದೆ ಎಂದು ಹೇಳಲು ಸಂತೋಷವಾಗುತ್ತಿದೆ’ ಎಂದು ಪ್ರತಿಕ್ರಿಯೆ ನೀಡಿದ್ದಾರೆ.ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳ ಒತ್ತಡಕ್ಕೆ ಮಣಿಯದೆ ಉತ್ತರ ಕೊರಿಯಾ ಮುಖ್ಯಸ್ಥ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ರಷ್ಯಾ ವಿದೇಶಾಂಗ ಸಚಿವ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.