Advertisement

ರಷ್ಯಾ- ಉಕ್ರೇನ್ ಸಂಘರ್ಷ: ಗೋವಾದಲ್ಲಿ ಪ್ರತಿಕೂಲ ಪರಿಣಾಮ

08:02 PM Feb 23, 2022 | Team Udayavani |

ಪಣಜಿ: ಯುದ್ಧ ಅಥವಾ ಯುದ್ಧದಂತಹ ಪರಿಸ್ಥಿತಿಯು ಮೊದಲು ಪ್ರವಾಸೋದ್ಯಮ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಕೋವಿಡ್ ನಿಂದಾಗಿ ಎರಡು ವರ್ಷಗಳಿಂದ ಪ್ರವಾಸೋದ್ಯಮ ವ್ಯವಹಾರವು ಮಂದಗತಿಯಲ್ಲಿ ಸಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಪರಿಸ್ಥಿತಿ ಅಥವಾ ಯುದ್ಧವು ಗೋವಾದ ಪ್ರವಾಸೋದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕ ಹೆಚ್ಚಾಗಿದೆ.

Advertisement

ಗೋವಾ ರಾಜ್ಯಕ್ಕೆ ಉಕ್ರೇನ್‍ಗಿಂತ ರಷ್ಯಾದಿಂದ ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಕಳೆದ ನವೆಂಬರ್ ಮತ್ತು ಡಿಸೆಂಬರ್, ಎರಡೇ ತಿಂಗಳಲ್ಲಿ ರಷ್ಯಾದಿಂದ ಸುಮಾರು 2000 ಕ್ಕೂ ಹೆಚ್ಚು ಪ್ರವಾಸಿಗರು ಗೋವಾಕ್ಕೆ ಆಗಮಿಸಿದ್ದಾರೆ. ಇತರ ದೇಶಗಳಿಂದಲೂ ಗೋವಾಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಈ ಯುದ್ಧ ಪರಿಸ್ಥಿತಿಯಿಂದಾಗಿ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗುವ ಭೀತಿ ಎದುರಾಗಿದೆ.

ರಷ್ಯಾ ದೇಶವು ಉಕ್ರೇನ್‍ನೊಳಗೆ ಸೇನೆಯನ್ನು ನಿಯೋಜಿಸಿದ್ದು,  ಇದರಿಂದಾಗಿ ಎರಡೂ ದೇಶಗಳ ನಡುವಿನ ಯುದ್ಧದ ಸಾಧ್ಯತೆ ಹೆಚ್ಚಾಗಿದೆ. ಟೂರಿಸಂ ಬ್ಯುಸಿನೆಸ್ ಎಂಡ್ ಟೂರಿಸಂ ಅಸೋಸಿಯೇಶನ್ ಪ್ರಕಾರ ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಗೋವಾ ಇಂತಹ ಯುದ್ಧ ಪರಿಸ್ಥಿತಿಗೆ ತುತ್ತಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next