Advertisement

ರಷ್ಯಾ-ಉಕ್ರೇನ್‌ ಬಿಕ್ಕಟ್ಟು ಚರ್ಚೆ: ಭಾರತ ಪ್ರತಿನಿಧಿ ಗೈರು

08:59 PM Oct 01, 2022 | Team Udayavani |

ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶನಿವಾರ ರಷ್ಯಾ ಮತ್ತು ಉಕ್ರೇನ್‌ ನಡುವಿನ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆದಿದೆ. ಅದರಲ್ಲಿ ಭಾರತದ ಪ್ರತಿನಿಧಿ ಗೈರುಹಾಜರಾಗಿದ್ದರು.

Advertisement

ಉಕ್ರೇನ್‌ನ ನಾಲ್ಕು ಪ್ರದೇಶಗಳನ್ನು ವಿಲೀನಗೊಳಿಸಿರುವುದಾಗಿ ರಷ್ಯಾ ಘೋಷಿಸಿಕೊಂಡ ಬೆನ್ನಲ್ಲೇ ಈ ಸಭೆ ನಡೆದಿದ್ದು, ಈ ವಿಲೀನವನ್ನು ಕಾನೂನುಬಾಹಿರ ಎಂದು ಘೋಷಿಸುವ ಬಗ್ಗೆ ಚರ್ಚೆ ನಡೆದಿದೆ.

15 ಸದಸ್ಯರಲ್ಲಿ 10 ಸದಸ್ಯರು ಇದಕ್ಕೆ ಒಪ್ಪಿದ್ದಾರೆ. ಆದರೆ ಶಾಶ್ವತ ಸದಸ್ಯವಾಗಿರುವ ರಷ್ಯಾ ಈ ನಿರ್ಧಾರಕ್ಕೆ ತಡೆಹಿಡಿದಿದೆ. ಈ ಬಿಕ್ಕಟ್ಟಿನ ಬಗ್ಗೆ ಮಾತನಾಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಂಬೋಜ್‌, “ಉಕ್ರೇನ್‌ನಲ್ಲಾಗುತ್ತಿರುವ ಬೆಳವಣಿಗೆಯಿಂದಾಗಿ ಭಾರತ ನೊಂದಿದೆ.

ಜೀವವನ್ನು ತೆಗೆಯುವಂತಹ ಯಾವುದೇ ನಿರ್ಧಾರ ಸೂಕ್ತವಲ್ಲ ಎಂದು ನಾವು ಈಗಾಗಲೇ ಹೇಳಿದ್ದೇವೆ’ ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next