Advertisement

ರಷ್ಯಾ-ಉಕ್ರೇನ್ ನಡುವೆ ಯುದ್ಧ: ಮಾಹಿತಿ ಕಲೆ ಹಾಕಲು ಕಂಟ್ರೋಲ್ ರೂಂ ಸ್ಥಾಪನೆ

10:24 PM Feb 25, 2022 | Team Udayavani |

ದೇವನಹಳ್ಳಿ : ರಷ್ಯಾ ಮತ್ತು ಉಕ್ರೇನ್ ದೇಶಗಳ ನಡುವೆ ಯುದ್ಧ ನಡೆಯುತ್ತಿದ್ದು, ಉಕ್ರೇನ್ ದೇಶದಲ್ಲಿ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇತರ ಉದ್ದೇಶಗಳಿಗೆ ವಾಸವಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ, ಅವರ ಬಗ್ಗೆ ಮಾಹಿತಿ ಕಲೆ ಹಾಕಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.

Advertisement

ಉಕ್ರೇನ್ ದೇಶದಲ್ಲಿ ವಾಸವಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳ ಬಗ್ಗೆ ಸಾರ್ವಜನಿಕರು ಮಾಹಿತಿಯನ್ನು ಕಂಟ್ರೋಲ್ ರೂಂ ಸಂಖ್ಯೆ: 080-29902025 ಅಥವಾ ಸಹಾಯವಾಣಿ: 080-1070, 080-22340676, ಇಮೇಲ್: revenuedmkar@gmail.com ಅಥವಾ manoarya@gmail.com ಇಲ್ಲಿಗೆ ಸಂಪರ್ಕಿಸಿ, ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನಗರಸಭೆ ಮಳಿಗೆ ಹರಾಜಿನಿಂದ 1.41ಕೋಟಿ ಆದಾಯ : 20 ವರ್ಷಗಳ ಬಳಿಕ ಹರಾಜಾದ ಮಳಿಗೆಗಳು

Advertisement

Udayavani is now on Telegram. Click here to join our channel and stay updated with the latest news.

Next