ಮುಂಬಯಿ:ರಷ್ಯಾ, ಉಕ್ರೇನ್ ನಡುವಿನ ಯುದ್ಧ ಭೀಕರ ಸ್ವರೂಪ ತಾಳಿದ್ದು ಇದರ ಪರಿಣಾಮ ಶುಕ್ರವಾರ(ಮಾರ್ಚ್ 04) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ ಮತ್ತು ನಿಫ್ಟಿ ಭಾರೀ ಇಳಿಕೆಯೊಂದಿಗೆ ದಿನದ ವಹಿವಾಟು ಆರಂಭಗೊಂಡಿದೆ.
ಇದನ್ನೂ ಓದಿ:ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ: ಆಸ್ಪತ್ರೆಗೆ ದಾಖಲು!
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 1,072.40 ಅಂಕಗಳಷ್ಟು ಕುಸಿತ ಕಂಡಿದ್ದು, 54,026.26 ಅಂಕಗಳಲ್ಲಿ ವಹಿವಾಟು ನಡೆದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 224.10 ಅಂಕಗಳಷ್ಟು ಇಳಿಕೆಯೊಂದಿಗೆ 16,273.95 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಸೆನ್ಸೆಕ್ಸ್ ಭಾರೀ ಪ್ರಮಾಣದಲ್ಲಿ ಕುಸಿತ ಕಂಡ ನಡುವೆಯೂ ಯುಪಿಎಲ್, ಐಟಿಸಿ, ಟಾಟಾ ಸ್ಟೀಲ್, ಯೆಸ್ ಬ್ಯಾಂಕ್, ಎಲ್ ಆ್ಯಂಡ್ ಟಿ, ಹಿಂಡಲ್ಕೋ ಇಂಡಸ್ಟ್ರೀಸ್, ಹಿಂದೂಸ್ತಾನ್ ಪೆಟ್ರೋಲಿಯಂ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಏಷಿಯನ್ ಪೇಂಟ್ಸ್, ಮಾರುತಿ ಸುಜುಕಿ, ಈಚರ್ ಮೋಟಾರ್ಸ್, ಹಿಂದೂಸ್ತಾನ್ ಯುನಿಲಿವರ್, ಪಿಡಿಲೈಟ್ ಇಂಡಸ್ಟ್ರೀಸ್, ಹೀರೋ ಮೋಟಾರ್, ಟೈಟಾನ್ ಕಂಪನಿ, ಇಂಟರ್ ಗ್ಲೋಬ್ ಏವಿಯೇಷನ್, ಎಸ್ ಬಿಐ ಕಾರ್ಡ್ಸ್ ಆ್ಯಂಡ್ ಪೇಮೆಂಟ್ ಸರ್ವೀಸ್ ಷೇರುಗಳು ಭಾರೀ ನಷ್ಟ ಕಂಡಿದೆ.