Advertisement
ಅದರಲ್ಲೂ ವಿಶೇಷವಾಗಿ ಭಾರತದಲ್ಲೇ ಎಕೆ-203 ರೈಫಲ್‌ಗಳ ತಯಾರಿಕೆಗೆ ರಷ್ಯಾದ ಸಹಭಾಗಿತ್ವ ಪಡೆಯುವ ಒಪ್ಪಂದಕ್ಕೂ ಸಹಿ ಬೀಳಲಿದೆ. ಈ ಮೂಲಕ ಭಾರತ ಮತ್ತು ರಷ್ಯಾ ನಡುವಿನ ಹಳೆಯ ಸ್ನೇಹವನ್ನು ಇನ್ನಷ್ಟು ಗಟ್ಟಿಗೊಳಿಸಲು ಉಭಯ ದೇಶಗಳು ಸಜ್ಜಾಗಿವೆ.
Related Articles
Advertisement
ಇದನ್ನೂ ಓದಿ:ಕತ್ರೀನಾ – ವಿಕ್ಕಿ ಕೌಶಲ್ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್ ಬಾರಾತ್
ರಷ್ಯಾದಿಂದ ಎಸ್-400 ಕ್ಷಿಪಣಿ ರಕ್ಷಣ ವ್ಯವಸ್ಥೆಯನ್ನು ಖರೀದಿಸಲು ಭಾರತ ಮುಂದಾಗಿರುವುದಕ್ಕೆ ಅಮೆರಿಕ ಈಗಾಗಲೇ ವಿರೋಧ ವ್ಯಕ್ತ ಪಡಿಸಿದೆ. ಆದರೂ ರಕ್ಷಣ ಸಾಮಗ್ರಿಗಳ ಖರೀದಿಯಲ್ಲಿ ವ್ಯೂಹಾತ್ಮಕ ಸ್ವಾಯತ್ತೆಯನ್ನು ಮುಂದುವರಿಸುವುದಾಗಿ ಭಾರತ ಸ್ಪಷ್ಟಪಡಿಸಿದೆ.
ಪುತಿನ್ ಅವರು ಸೋಮವಾರ ಬೆಳಗ್ಗೆ ಭಾರತಕ್ಕೆ ಬಂದಿಳಿದು, ಪ್ರಧಾನಿ ಮೋದಿ ಅವರು ಆಯೋಜಿಸಿರುವ ಔತಣಕೂಟದಲ್ಲಿ ಪಾಲ್ಗೊಂಡು ರಾತ್ರಿಯೇ ರಷ್ಯಾಗೆ ಮರಳಲಿದ್ದಾರೆ. ಕೊರೊನಾ ಸೋಂಕು ವ್ಯಾಪಿಸಲು ಆರಂಭವಾದ ಬಳಿಕ ಪುತಿನ್ ಅವರ ಎರಡನೇ ವಿದೇಶ ಭೇಟಿ ಇದಾಗಿದೆ.