ಜೋಹಾನ್ಸ್‌ಬರ್ಗ್: ಭಾರತದ ಮೂರನೇ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವವನ್ನು ದೋಷ ರಹಿತವಾಗಿ 41 ದಿನಗಳ ಪ್ರಯಾಣದ ನಂತರ ಬುಧವಾರ ಸಂಜೆ 6.04 ಕ್ಕೆ ಯಶಸ್ವಿಯಾಗಿ ಸ್ಪರ್ಶಿಸಿದ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವ ನಾಯಕರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ನಡೆದ ಬ್ರಿಕ್ಸ್ ಔತಣಕೂಟದ ವೇಳೆ ರಷ್ಯಾ, ಯುಎಇ, ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ ಸೇರಿದಂತೆ ವಿಶ್ವದ ಹಿರಿಯ ನಾಯಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಯುಎಇ ಉಪಾಧ್ಯಕ್ಷ ಶೇಖ್ ಮೊಹಮ್ಮದ್ ಅವರು ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿ ವೈಜ್ಞಾನಿಕ-ತಾಂತ್ರಿಕ ಕ್ಷೇತ್ರದಲ್ಲಿ ಭಾರತದ ಪ್ರಭಾವಶಾಲಿ ಪ್ರಗತಿಗೆ ಸಾಕ್ಷಿಯಾಗಿದೆ ಅಲ್ಲದೆ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಸಾಕ್ಷಿಯಾಗಿದೆ ಎಂದು ಹೇಳಿದರು. ಅಲ್ಲದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮಾತನಾಡಿ ಬಾಹ್ಯಾಕಾಶದ ಅನ್ವೇಷಣೆಯಲ್ಲಿ ಇದು ಸುದೀರ್ಘ ದಾಪುಗಾಲು ಮತ್ತು ವಿಜ್ಞಾನ ಮತ್ತು ಎಂಜಿನಿಯರಿಂಗ್‌ನಲ್ಲಿ ಭಾರತ ಸಾಧಿಸಿರುವ ಪ್ರಭಾವಶಾಲಿ ಪ್ರಗತಿಗೆ ಸಾಕ್ಷಿಯಾಗಿದೆ, ”ಎಂದು ಹೇಳಿದರು.
ಇದರ ಜೊತೆಗೆ ನೇಪಾಳ ಪ್ರಧಾನಿ ಕೂಡ ಟ್ವಿಟರ್ ‘ಎಕ್ಸ್’ ನಲ್ಲಿ ಭಾರತದ ಯಶಸ್ಸಿಗೆ ಅಭಿನಂದನೆಯನ್ನು ಸಲ್ಲಿಸಿದ್ದು ‘ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ-3 ಯಶಸ್ವಿಯಾಗಿ ಲ್ಯಾಂಡಿಂಗ್ ಮತ್ತು ವಿಜ್ಞಾನ ಮತ್ತು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಐತಿಹಾಸಿಕ ಸಾಧನೆಯನ್ನು ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಜಿ ಮತ್ತು ಭಾರತದ ಇಸ್ರೋ ತಂಡವನ್ನು ನಾನು ಅಭಿನಂದಿಸುತ್ತೇನೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಅವರು “ಇದೊಂದು ಭಾರತದ ಐತಿಹಾಸಿಕ ಕ್ಷಣ” ಎಂದು ಬಣ್ಣಿಸಿದ್ದು. “ಚಂದ್ರನ ದಕ್ಷಿಣ ಧ್ರುವದಲ್ಲಿ ಮೊದಲ ಬಾರಿಗೆ ಇಳಿದ ಭಾರತಕ್ಕೆ ಅಭಿನಂದನೆಗಳು. ಭಾರತೀಯ ಜನರ ಅಸಾಮಾನ್ಯ ಸಾಧನೆ” ಎಂದು ಅವರು ಹೇಳಿದರು.
ಮಾಲ್ಡೀವ್ಸ್ ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ ಅಭಿನಂದಿಸಿದ್ದು. “ಭಾರತವು ಇತಿಹಾಸವನ್ನು ಸೃಷ್ಟಿಸುತ್ತದೆ! ದಕ್ಷಿಣ ಏಷ್ಯಾದ ರಾಷ್ಟ್ರವಾಗಿ ಮತ್ತು ನೆರೆಯ ರಾಷ್ಟ್ರವಾಗಿ, ಚಂದ್ರನ ದಕ್ಷಿಣ ಧ್ರುವದ ಬಳಿ ಚಂದ್ರಯಾನ ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿರುವ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ಇದು ಎಲ್ಲಾ ಮಾನವೀಯತೆಯ ಯಶಸ್ಸು! ಹೊಸ ಅನ್ವೇಷಣೆಯ ಕ್ಷೇತ್ರಗಳಿಗೆ ಹೊಸ ಮಾರ್ಗಗಳನ್ನು ತೆರೆಯುತ್ತದೆ. ಅಭಿನಂದನೆಗಳು ಎಂದು ಹೇಳಿದ್ದಾರೆ.
ನಾಲ್ಕು ವರ್ಷಗಳಲ್ಲಿ ತನ್ನ ಎರಡನೇ ಪ್ರಯತ್ನದಲ್ಲಿ ಚಂದ್ರನ ಮೇಲೆ ಈ ಸ್ಪರ್ಶದ ಮೂಲಕ, ಭಾರತವು ಯುಎಸ್, ಚೀನಾ ಮತ್ತು ಹಿಂದಿನ ಸೋವಿಯತ್ ಒಕ್ಕೂಟದ ನಂತರ ಚಂದ್ರನ ಮೇಲ್ಮೈಯಲ್ಲಿ ಸಾಫ್ಟ್ ಲ್ಯಾಂಡಿಂಗ್ ತಂತ್ರಜ್ಞಾನವನ್ನು ಕರಗತ ಮಾಡಿಕೊಂಡ ನಾಲ್ಕನೇ ದೇಶವಾಗಿದೆ.
ಇದನ್ನೂ ಓದಿ: Daily Horoscope: ಅವಕಾಶಗಳ ಆಯ್ಕೆಯ ವಿಷಯಕ್ಕೆ ಗೊಂದಲ, ಅನಿರೀಕ್ಷಿತ ಧನಲಾಭ