ಮುಂಬೈ: ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದ ಉತ್ಸಾಹದಲ್ಲಿರುವ ಟೀಂ ಇಂಡಿಯಾ ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗಿದೆ. ಶುಕ್ರವಾರದಿಂದ ವಿಂಡೀಸ್ ವಿರುದ್ಧ ಏಕದಿನ ಸರಣಿ ಆರಂಭವಾಗಲಿದೆ. ಸೀನಿಯರ್ ಆಟಗಾರರು ವಿಶ್ರಾಂತಿ ಪಡೆದ ಕಾರಣ ಯುವ ಪಡೆ ಕೆರಿಬಿಯನ್ ಸವಾಲು ಎದುರಿಸಲಿದೆ.
ನಾಯಕ ರೋಹಿತ್ ಶರ್ಮಾ ಅಲಭ್ಯತೆಯ ಕಾರಣದಿಂದ ಶಿಖರ್ ಧವನ್ ಅವರು ತಂಡದ ಚುಕ್ಕಾಣಿ ಹಿಡಿದಿದ್ದಾರೆ. ತಂಡದಲ್ಲಿ ಶಿಖರ್ ಧವನ್ ಜೊತೆಗೆ ಆರಂಭಿಕರಾಗಿ ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್ ಮತ್ತು ಇಶಾನ್ ಕಿಶನ್ ತಂಡದಲ್ಲಿದ್ದಾರೆ. ಆದರೆ ಯಾರು ಅಂತಿಮ ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂದು ಕಾದು ನೋಡಬೇಕಿದೆ.
ಮಾಜಿ ಆಟಗಾರ ವಾಸಿಂ ಜಾಫರ್ ಅವರು ಈ ಬಗ್ಗೆ ಸಲಹೆ ನೀಡಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರು ಏಕದಿನ ಪದಾರ್ಪಣೆ ಮಾಡಬೇಕು. ಅವರು ಧವನ್ ಜೊತೆ ಆರಂಭಿಸಬೇಕು. ಋತುರಾಜ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಐದು ಇನ್ನಿಂಗ್ಸ್ ನಲ್ಲಿ ನಾಲ್ಕು ಶತಕ ಬಾರಿಸಿದ್ದರು. ಅಲ್ಲದೆ ಎಡಗೈ- ಬಲಗೈ ಕಾಂಬಿನೇಶನ್ ಉತ್ತಮವಾಗಿರಲಿದೆ ಎಂದು ಜಾಫರ್ ಹೇಳಿದ್ದಾರೆ.
64 ಲಿಸ್ಟ್ ಎ ಪಂದ್ಯಗಳಲ್ಲಿ ಋತುರಾಜ್ ಗಾಯಕ್ವಾಡ್ 54.73ರ ಸರಾಸರಿಯಲ್ಲಿ 3284 ರನ್ ಗಳಿಸಿದ್ದಾರೆ. ಕಳೆದ ವರ್ಷದ ಶ್ರೀಲಂಕಾ ವಿರುದ್ದ ಟಿ20 ಯಲ್ಲಿ ಪದಾರ್ಪಣೆ ಮಾಡಿದ್ದರು.
Related Articles
ಭಾರತ ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.