Advertisement

TTD ಆಡಳಿತ ಮಂಡಳಿಯ ಸದಸ್ಯರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಆರ್.ವಿ.ದೇಶಪಾಂಡೆ

05:53 PM Aug 28, 2023 | Team Udayavani |

ದಾಂಡೇಲಿ : ದಕ್ಷಿಣ ಭಾರತದ ಪ್ರಸಿದ್ಧ ತೀರ್ಥಕ್ಷೇತ್ರಗಳಲ್ಲಿ ಒಂದಾಗಿರುವ ಆಂಧ್ರಪ್ರದೇಶದ ಶ್ರೀ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೋಮವಾರ ಹಳಿಯಾಳ – ಜೋಯಿಡಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ವಿ. ದೇಶಪಾಂಡೆ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನವನ್ನು ಪಡೆದು ಆನಂತರ ಶ್ರೀ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

Advertisement

ಶ್ರೀ ತಿರುಮಲ ತಿರುಪತಿ ದೇವಸ್ಥಾನದ ಪರವಾಗಿ ಆರ್.ವಿ ದೇಶಪಾಂಡೆ ದಂಪತಿಗಳನ್ನು ಸನ್ಮಾನಿಸಲಾಯಿತು. ಆರ್.ವಿ.ದೇಶಪಾಂಡೆಯವರ ಧರ್ಮಪತ್ನಿ ರಾಧಾ ದೇಶಪಾಂಡೆ, ಪುತ್ರ ಪ್ರಸಾದ್ ದೇಶಪಾಂಡೆ ಹಾಗೂ ಕುಟುಂಬಸ್ಥರು ಮತ್ತು ತಿರುಮಲ ತಿರುಪತಿ ದೇವಸ್ಥಾನದ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next