Advertisement

SC ಮತ್ತು SC ಕಲ್ಯಾಣ ಸಮಿತಿಗೆ ಅಧ್ಯಕ್ಷರಾಗಿ ಎಸ್. ಅಂಗಾರ ನೇಮಕ

08:49 AM Sep 22, 2019 | keerthan |

ಬೆಂಗಳೂರು: ಸುಳ್ಯ ಕ್ಷೇತ್ರದ ಬಿಜೆಪಿ ಶಾಸಕ ಎಸ್. ಅಂಗಾರ ಅವರನ್ನು ಎಸ್ ಸಿ ಮತ್ತು ಎಸ್ ಸಿ ಕಲ್ಯಾಣ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Advertisement

ಇನ್ನುಳಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಕೆ. ಪೂರ್ಣಿಮಾ ಅವನ್ನು ನೇಮಿಸಲಾಗಿದೆ. ಗ್ರಂಥಾಲಯ ಸಮಿತಿಗೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇಮಕ ಮಾಡಿದ್ದರೆ , ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿ ಅಧ್ಯಕ್ಷರಾಗಿ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಅರಗ ಜ್ಞಾನೇಂದ್ರ ಅವರ ನೇಮಕವಾಗಿದೆ.

ಹಕ್ಕು ಬಾಧ್ಯತಾ ಸಮಿತಿ ಮತ್ತು ಅಂದಾಜುಗಳ ಸಮಿತಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದು ಕ್ರಮವಾಗಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್.ಎ.ರವೀಂದ್ರನಾಥ್ ಮತ್ತು ಹಾನಗಲ್ಲ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರನ್ನು ಅಧಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next