Advertisement

ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಸುಳ್ಯ ಶಾಸಕ ಎಸ್.ಅಂಗಾರ

12:36 PM Jan 13, 2021 | keerthan |

ಬೆಂಗಳೂರು: ನಾನೇನು ಇಂತಹದೇ ಸಚಿವ ಸ್ಥಾನ ಬೇಕು ಎಂದು ಕೇಳುವುದಿಲ್ಲ. ಯಾವುದೇ ಖಾತೆ  ಕೊಟ್ಟರೂ ನಿಭಾಯಿಸುತ್ತೇನೆ. ನನ್ನ ಕ್ಷೇತ್ರದ ಜನ ಯಡಿಯೂರಪ್ಪ ಮತ್ತು ಸಂಘಟನೆಗೆ ಧನ್ಯವಾದ ತಿಳಿಸುತ್ತೇನೆ ಎಂದು ಸುಳ್ಯ ಕ್ಷೇತ್ರದ ಶಾಸಕ ಎಸ್ ಅಂಗಾರ ಹೇಳಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಬಾರಿ ಗೆಲ್ಲಿಸಿದ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘ ನನ್ನ ಈ ಮಟ್ಟಕ್ಕೆ ಬೆಳೆಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಸ್ವತಃ ಕರೆ ಮಾಡಿ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದರು. ವರಿಷ್ಠರು ಮತ್ತು ಯಡಿಯೂರಪ್ಪ ಎಲ್ಲ ಸೇರಿ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ಇದನ್ನೂ ಓದಿ:ಬಿಎಸ್ ವೈ ಗೆ ಸಂಪುಟ ಸಂಕಟ: ಮುನಿರತ್ನ ಸೇರ್ಪಡೆಗೆ ಕಸರತ್ತು, ನಾಗೇಶ್ ಗೆ ಕೊಕ್?

ನನಗೆ ಯಾವ ಖೋಟಾದಲ್ಲಿಯೂ ಸಚಿವ ಸ್ಥಾನ ಕೊಟ್ಟಿಲ್ಲ. ಸಂಘಟನೆ ನೋಡಿ ಕೊಟ್ಟಿದ್ದಾರೆ. ಯಾವುದೇ ಸಚಿವ ಸ್ಥಾನ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅಂಗಾರ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next