Advertisement

ರೈತರ ಪ್ರತಿಭಟನೆಗೆ ವಿಪಕ್ಷಗಳ ಕುಮ್ಮಕ್ಕು: ಕೋಲಾರ ಸಂಸದ ಎಸ್‌.ಮುನಿಸ್ವಾಮಿ ಆರೋಪ

11:33 AM Dec 26, 2020 | sudhir |

ಚಿಂತಾಮಣಿ: ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಪಂಜಾಬ್‌ ಮತಿತ್ತರ ಕಡೆ ಪ್ರತಿಭಟನೆ ಮಾಡುತ್ತಿರುವ
ರೈತರು ಕಾಂಗ್ರೆಸ್‌ ಪಕ್ಷದ ಏಜೆಂಟರು, ನಕಲಿ ರೈತರು ಹಾಗೂ ದಲ್ಲಾಳಿಗಳಾಗಿದ್ದಾರೆ ಎಂದು ಪ್ರತಿಭಟನಾ ನಿರತ ರೈತರ ವಿರುದ್ಧ
ಕೋಲಾರ ಸಂಸದ ಎಸ್‌.ಮುನಿಸ್ವಾಮಿ ಕಿಡಿಕಾರಿದ್ದಾರೆ.

Advertisement

ನಗರಕ್ಕೆ ಖಾಸಗಿ ಕಾರ್ಯದ ನಿಮಿತ್ತ ಆಗಮಿಸಿದ್ದ ವೇಳೆ ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಯಿಂದ ರೈತರಿಗೆ ತೊಂದರೆಯಾಗಲ್ಲ, ವಿನಾಃ ಕಾರಣ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು, ಪಂಜಾಬ್‌, ಹರಿಯಾಣ ಮತ್ತಿತರೆಡೆ ನಕಲಿ ರೈತರನ್ನು ಎತ್ತಿಕಟ್ಟಿ ಪ್ರತಿಭಟನೆ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕೃಷಿ ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಿವಣ್ಣ, ತಾಪಂ ಮಾಜಿ ಉಪಾಧ್ಯಕ್ಷ ನಡಂಪಲ್ಲಿ ಶ್ರೀನಿವಾಸ್‌, ಕೋನಪಲ್ಲಿ ವೆಂಕಟಶಿವಪ್ಪ,
ಗಾಜಲು ಶಿವ ಸೇರಿದಂತೆ ಮತಿತ್ತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಫಾಸ್ಟ್‌ ಟ್ಯಾಗ್‌ ಮೂಲಕ ಒಂದೇ ದಿನದಲ್ಲಿ 80 ಕೋಟಿ ರೂ. ಸಂಗ್ರಹ

Advertisement

Udayavani is now on Telegram. Click here to join our channel and stay updated with the latest news.

Next