Advertisement

Chikkamagaluru: ಮಳೆ ಕಡಿಮೆಯಾಗುವ ತನಕ ಪ್ರವಾಸ ಮುಂದೂಡುವಂತೆ ಎಸ್.ಪಿ. ಮನವಿ

09:23 AM Jul 25, 2023 | Team Udayavani |

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಸ ಮುಂದೂಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.

Advertisement

ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ನದಿ, ಜಲಪಾತಗಳು, ಭೂ ಕುಸಿತದ ಪ್ರಕರಣಗಳು ಹೆಚ್ಚಾಗಿದ್ದು, ಅಪಾಯವಿರುವುದರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಪ್ರವಾಸಿಗರಲ್ಲಿ ಮನವಿ ಮಾಡಿದ್ದಾರೆ.

ಸುರಕ್ಷತೆ ದೃಷ್ಟಿಯಿಂದ ಮಳೆ ಕಡಿಮೆಯಾಗುವ ತನಕ ಪ್ರವಾಸ ಮುಂದೂಡುವಂತೆ ಎಸ್.ಪಿ.ಉಮಾಪ್ರಶಾಂತ್ ಪ್ರವಾಸಿಗರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕಾಫಿನಾಡ ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಆರ್ಭಟಕ್ಕೆ ತುಂಗಾ ನದಿ ಉಕ್ಕಿ ಹರಿಯುತ್ತಿದೆ.

Advertisement

ತುಂಗಾ ನದಿ ಅಬ್ಬರಕ್ಕೆ ನದಿ ಪಾತ್ರದ ಗದ್ದೆ-ತೋಟಗಳು ಜಲಾವೃತಗೊಂಡಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನರಸೀಪುರ, ಹರಿಹರಪುರ ಗ್ರಾಮದಲ್ಲಿ ನಡೆದಿದೆ.

ಈ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಗದ್ದೆ, ಅಡಿಕೆ ತೋಟಗಳು ಮುಳುಗಡೆಯಾಗಿದ್ದು, ಭತ್ತ ನಾಟಿ ಮಾಡಿದ್ದ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ. ಭಾರೀ ಮಳೆಯಿಂದಾಗಿ ನದಿ ಸಮೀಪದ ರೈತರು ಕಂಗಾಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next