ಬೆಂಗಳೂರು: ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ಅಪಾರವಾದ ತ್ಯಾಗ, ಬಲಿದಾನ ಮಾಡಿದ್ದಾರೆ. ತಮ್ಮ ಸರ್ವಸ್ವವನ್ನು ದೇಶಕ್ಕಾಗಿ ಅರ್ಪಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಗಾಂಧಿ ಕುಟುಂಬದಿಂದಲೇ ನಾಯಕತ್ವ ಮುಂದುವರೆದರೆ ಒಳ್ಳೆಯದು ಎಂದು ವಿಧಾನ ಪರಿಷತ್ ನ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗಾಂಧಿ ಕುಟುಂಬದ ಹಿರಿಯರು ದೇಶಕ್ಕಾಗಿ ದೀರ್ಘವಾದ ಸೆರೆವಾಸವನ್ನು ಅನುಭವಿಸಿದ್ದಾರೆ. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಕಟ್ಟುವಲ್ಲಿಯೂ ಗಾಂಧಿ ಕುಟುಂಬದ ಕೊಡುಗೆ ಅಪಾರವಾಗಿದೆ ಹಾಗಾಗಿ ಗಾಂಧಿ ಕುಟುಂಬದಿಂದಲೇ ನಾಯಕತ್ವ ಮುಂದುವರೆದರೆ ಒಳ್ಳೆಯದು. ಎಐಸಿಸಿ ಹೊಣೆಗಾರಿಕೆಯನ್ನು ಗಾಂಧಿ ಕುಟುಂಬವರೆ ವಹಿಸಿಕೊಳ್ಳುವುದು ಸೂಕ್ತ ಎಂದು ಎಸ್ ಆರ್ ಪಾಟೀಲ್ ಹೇಳಿದ್ದಾರೆ.
ಇದನ್ನೂ ಓದಿ: ಕೈ ಪಾಳಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ: ಕಾಂಗ್ರೆಸ್ ಮುಂದಿದೆ ನಾಲ್ಕು ದಾರಿಗಳು
ಎಐಸಿಸಿ ನಾಯಕತ್ವ ಬದಲಾವಣೆಯ ಕುರಿತು ಇಂದು ನಡೆಯುತ್ತಿರುವ ಕಾರ್ಯಕಾರಣಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.