Advertisement
ಪ್ರಾಧಿಕಾರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದಾದ್ಯಂತ ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸ್ವತ್ತು ಇದೆ. ನಾನಾ ಕಾರಣಗಳಿಂದಾಗಿ ಇಂತಹ ಸ್ವತ್ತು ಪರರ ವಶದಲ್ಲಿದೆ. ಈ ಸ್ವತ್ತನ್ನು ಬಿಡಿಎ ವಶಪಡಿಸಿಕೊಂಡು ಸಾರ್ವಜನಿಕರ ಅನುಕೂಲಕ್ಕಾಗಿ ನಿವೇಶನಗಳನ್ನಾಗಿ ಮಾಡಿ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.
ಬಿಡಿಎಗೆ ಸೇರಿದ ಸಾವಿರಾರು ನಿವೇಶನಗಳನ್ನು ಪತ್ತೆ ಮಾಡುವ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ನ್ಯಾಯಾಲಯದ ಆದೇಶದಂತೆ ಇಂತಹ ನಿವೇಶನಗಳನ್ನು ಬಿಡಿಎ ಮರು ವಶಕ್ಕೆ ಪಡೆದುಕೊಂಡು ಹರಾಜು ಹಾಕುವ ಮೂಲಕ ಆರ್ಥಿಕ ಸಂಪನ್ಮೂಲವನ್ನು ಕ್ರೋಢೀಕರಿಸಲಿದೆ. ಹೀಗೆ ಮುಂದಿನ ಒಂದು ವರ್ಷದ ಅವಧಿಯಲ್ಲಿ 10 ರಿಂದ 15 ಸಾವಿರ ಕೋಟಿ ರೂಪಾಯಿ ಸಂಗ್ರಹ ಮಾಡುವ ನಿರೀಕ್ಷೆ ಇದೆ. ಈ ಮೂಲಕ ಸಂಸ್ಥೆಯನ್ನು ಆರ್ಥಿಕ ಸ್ವಾವಲಂಬಿಯನ್ನಾಗಿ ಮಾಡುವುದಲ್ಲದೇ, ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆಯನ್ನು ನೀಡಲಿದೆ ಎಂದು ತಿಳಿಸಿದರು.
Related Articles
Advertisement
ಇದನ್ನೂ ಓದಿ : ಗುರುದ್ವಾರದಲ್ಲಿ ಪೋಸ್ ಕೊಟ್ಟು ಪಜೀತಿಗೆ ಸಿಲುಕಿದ ಪಾಕ್ ಮಾಡೆಲ್
ಸಿಬ್ಬಂದಿಗೆ ಸುಸಜ್ಜಿತ ಕಲ್ಯಾಣಮಂಟಪಇದೇ ವೇಳೆ, ಇತರೆ ಇಲಾಖೆಗಳ ಸಿಬ್ಬಂದಿಗೆ ಇರುವ ರೀತಿಯಲ್ಲಿ ಬಿಡಿಎ ಸಿಬ್ಬಂದಿಗಾಗಿ ಒಂದು ಸುಸಜ್ಜಿತವಾದ ಕಲ್ಯಾಣಮಂಟಪವನ್ನು ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಜಾಗ ಗುರುತಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಕಲ್ಯಾಣಮಂಟಪ ನಿರ್ಮಾಣವಾಗಲಿದೆ ಎಂದು ವಿಶ್ವನಾಥ್ ತಿಳಿಸಿದರು. ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರು ಮಾತನಾಡಿ, ಬಿಡಿಎಯನ್ನು ಸಾರ್ವಜನಿಕ ಸ್ನೇಹಿ ಸಂಸ್ಥೆಯಾಗಿ ಮಾಡುವ ಜವಾಬ್ದಾರಿ ಎಲ್ಲರ ಮೇಲಿದ್ದು, ಇದಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ರಾಕೇಶ್ ಸಿಂಗ್ ಅವರಿಂದ ಧ್ವಜಾರೋಹಣ
ಬೆಳಗ್ಗೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು. ಸಮಾರಂಭದಲ್ಲಿ ಬಿಡಿಎ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಜಿ.ಎಂ.ಶಿವಶಂಕರ್ ಸೇರಿದಂತೆ ಪದಾಧಿಕಾರಿಗಳು, ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು. ಗಾಯಕರಾದ ಆಯುಕ್ತ!
ರಾಜ್ಯೋತ್ಸವ ಸಮಾರಂಭದಲ್ಲಿ ರಸಮಂಜರಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ, ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರು ನಾಲ್ಕೈದು ಕನ್ನಡ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.