Advertisement

ದಾವಣಗೆರೆ : ಶಾಮನೂರು ಶಿವಶಂಕರಪ್ಪ ಬದಲಿಗೆ ಪುತ್ರ ಕಣಕ್ಕೆ

10:01 AM Mar 30, 2019 | Vishnu Das |

ದಾವಣಗೆರೆ: ಕಾಂಗ್ರೆಸ್‌ ಪಕ್ಷದಿಂದ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಕೊನೆಗೂ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಅವರು ಒಪ್ಪಿಕೊಂಡಿದ್ದಾರೆ.

Advertisement

ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನಲೆಯಲ್ಲಿ ಕಾಂಗ್ರೆಸ್‌ ಪುತ್ರ ಮಲ್ಲಿಕಾರ್ಜುನ್‌ ಅವರ ಮನವೊಲಿಸಿ ಅಭ್ಯರ್ಥಿಯನ್ನಾಗಿಸುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಮಾತುಕತೆ ನಡೆಸಿ ಮಲ್ಲಿಕಾರ್ಜುನ್‌ ಅವರ ಮನವೊಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್‌ ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ್‌ ಅವರು ಸಿದ್ದೇಶ್ವರ್‌ ವಿರುದ್ಧ ಮೂರು ಬಾರಿ ಸೋಲು ಕಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next