Advertisement
ಮಂಗಳವಾರ ತ್ರಿಶೂಲ್ ಕಲಾಭವನದಲ್ಲಿ ನಡೆದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನೂತನ ಕಟ್ಟಡದ ಶಂಕುಸ್ಥಾಪ ನಾ ಕಾರ್‍ಯಕ್ರಮದಲ್ಲಿ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಮೋಸ, ಅವ್ಯವಹಾರ, ಭ್ರಷ್ಟಾಚಾರ ತಡೆಗೆ ಈಗಿರುವ ಕಾನೂನುಗಳ ಜೊತೆಗೆ ಇನ್ನೂ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದರು.
Related Articles
Advertisement
ಇದನ್ನೂ ಓದಿ : 6 ವರ್ಷದಿಂದ ಸಂಬಳವೇ ಇಲ್ಲ: ಮನನೊಂದು ತಾ.ಪಂ ಕಚೇರಿಯಲ್ಲೇ ನೇಣಿಗೆ ಶರಣಾದ ಗುತ್ತಿಗೆ ನೌಕರ
ಯಶಸ್ವಿನಿ… ಯೋಜನೆ ಮರು ಜಾರಿಗೊಳಿಸಬೇಕು ಎಂಬ ಒತ್ತಡದ ಹಿನ್ನೆಲೆಯಲ್ಲಿ ಸರ್ಕಾರ ಯಶಸ್ವಿನಿ ಯೋಜನೆ ಮರು ಜಾರಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಜೆಟ್‌ನಲ್ಲಿ ಘೋಷಣೆ ಸಹ ಮಾಡಿದ್ದಾರೆ. ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೆ ಚಿಂತನೆ ನಡೆದಿತ್ತು. ಈಗ ಅದಕ್ಕಿಂತ ಮುನ್ನವೇ ಯೋಜನೆ ಮರು ಜಾರಿಗೆ ಸರ್ಕಾರ ಎಲ್ಲ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ 30 ಲಕ್ಷ ರೈತರಿಗೆ 20,180 ಕೋಟಿ ಸಾಲ ವಿತರಣೆ ಗುರಿಗೆ ಹೆಚ್ಚಾಗಿ ಶೇ. 102 ರಷ್ಟು ಪ್ರಮಾಣ ದಲ್ಲಿ ಸಾಲ ನೀಡಲಾಗಿತ್ತು. ಈ ಬಾರಿಯ ಬಜೆಟ್‌ನಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಆದಷ್ಟು ಬೇಗ ಸಾಲ ಸೌಲಭ್ಯ ವಿತರಣೆ ಪ್ರಾರಂಭ ಮಾಡಲಾಗುವುದು ಎಂದು ಸಚಿವ ಸೋಮಶೇಖರ್ ತಿಳಿಸಿದರು.
ರಾಜ್ಯದಲ್ಲಿ 9 ಲಕ್ಷ ಮಹಿಳೆಯರು ಸೇರಿದಂತೆ 26 ಲಕ್ಷದಷ್ಟು ರೈತರು ಹಾಲು ಉತ್ಪನ್ನ ಸಹಕಾರ ಸಂಘಗಳಿಗೆ ಹಾಲು ಮಾರಾಟ ಮಾಡುತ್ತಿದ್ದಾರೆ. ಅ ಎಲ್ಲ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಪ್ರಾರಂಭಿಸಿ, 26 ಲಕ್ಷ ಜನರಿಗೆ ಸದಸ್ಯತ್ವ ನೀಡಿ, ಕ್ರೆಡಿಟ್ ಕಾರ್ಡ್ ಇತರೆ ಸೌಲಭ್ಯ ಒದಗಿಸುವ ಚಿಂತನೆ ನಡೆದಿದೆ. ಬ್ಯಾಂಕ್ ಆರಂಭಿಸುವ ಕುರಿತಂತೆ ರಿಸರ್ವ್ ಬ್ಯಾಂಕ್‌ನೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.