Advertisement

ಎಪಿಎಂಸಿ ಪ್ರಾಮುಖ್ಯತೆ ಮತ್ತು ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ; ಸಚಿವ ಸೋಮಶೇಖರ್

06:23 PM Dec 28, 2020 | sudhir |

ಬೆಂಗಳೂರು ; ಎಲ್ಲಾ ಎಪಿಎಂಸಿ ಉತ್ಪನ್ನಗಳು ಹಾಗೂ ವೈಶಿಷ್ಯತೆಗಳ ಕುರಿತಾದ ಕಿರುಚಿತ್ರವೊಂದನ್ನು ನಿರ್ಮಾಣ ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮ ಶೇಖರ್ ಹೇಳಿದ್ದಾರೆ.

Advertisement

ಸೋಮವಾರ ಎಪಿಎಂಸಿ ಪ್ರಧಾನ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕೃಷಿ ಮಾರಾಟ ಮಂಡಳಿಯ ಪ್ರಧಾನಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು ಎಪಿಎಂಸಿ ಮಹತ್ವ ಏನು..? ಯಾವ ಯಾವ ಎಪಿಎಂಸಿಗಳು ಯಾವುದಕ್ಕೆ ಪ್ರಖ್ಯಾತಿ ಪಡೆದಿದೆ…? ಅಲ್ಲಿಗೆ ಬರುವ ಪ್ರಮುಖ ಉತ್ಪನ್ನಗಳು ಯಾವುವು..? ಅವು ಯಾವ ಯಾವ ಕಡೆ ರಫ್ತಾಗುತ್ತದೆ.? ಯಾವ ಕಾರಣಕ್ಕೆ ಉಪಯೋಗವಾಗುತ್ತದೆ ಎಂಬಿತ್ಯಾದಿ ಮಾಹಿತಿಗಳುಳ್ಳ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.

ಎಲ್ಲ ಎಪಿಎಂಸಿಗಳಿಗೆ ಭೇಟಿ ನೀಡಿ ಅವುಗಳ ಸಾಧನೆ ಬಗ್ಗೆ, ಅಲ್ಲಿನ ಉತ್ಪನ್ನಗಳು ಹಾಗೂ ಅದರ ವೈಶಿಷ್ಟ್ಯದ ಬಗ್ಗೆ ಕಿರುಚಿತ್ರ ನಿರ್ಮಾಣ ಮಾಡಿ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುವುದು. ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು, ಸದಾನಂದ ಗೌಡ ಅವರ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಆಗುವ ಅನುಕೂಲಗಳ ಬಗ್ಗೆ ಈಗಾಗಲೇ ಮಾಧ್ಯಮಗಳ ಮೂಲಕ ಜಾಹೀರಾತುಗಳನ್ನು ನೀಡಲಾಗಿದೆ. ಇನ್ನು ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಿ ರೈತರಿಗೆ ಅರಿವು ಮೂಡಿಸಲಾಗುವುದು. ಇದಕ್ಕೋಸ್ಕರವೇ ಕಿರುಚಿತ್ರ ನಿರ್ಮಾಣ ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಲಂಡನ್ ನಿಂದ ಮುಂಬೈಗೆ ಮರಳಿದ್ದ ಮತ್ತೆ ಮೂವರಿಗೆ ಕೋವಿಡ್ ಪಾಸಿಟಿವ್‌

Advertisement

ಎಪಿಎಂಸಿಯಲ್ಲಿ ಶುಲ್ಕ ಭರಿಸಲು ಏಕರೂಪ ನೀತಿಗೆ ಚಿಂತನೆ

ಎಪಿಎಂಸಿ ಕಾಯ್ದೆ ಬದಲಾವಣೆಗೂ ಸರ್ಕಾರ ಬದ್ಧವಾಗಿದೆ. ಎಪಿಎಂಸಿ ಒಳಗೆ ಹಾಗೂ ಹೊರಗೆ ಮಾರಾಟ ಮಾಡಲು ಏಕರೂಪ ನೀತಿ ಅಳವಡಿಸುವ ಬಗ್ಗೆ ಚಿಂತನೆ ಮಾಡುತ್ತೇವೆ. ಇನ್ನು ಎಲ್ಲ 162 ಎಪಿಎಂಸಿಗಳಿಗೂ ನಾನು ಭೇಟಿ ನೀಡಿ ಅವಹಾಲುಗಳನ್ನು ಆಲಿಸಲಿದ್ದೇನೆ.
ಈಗಿರುವ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು? ಯಾವ ಬದಲಾವಣೆಗಳನ್ನು ತಂದರೆ ಏನು ಮಾಡಬಹುದು? ಅಧಿಕಾರ ವಿಕೇಂದ್ರೀಕರಣ ಮಾಡಿ ಸ್ಥಳೀಯವಾಗಿ ಯಾವ ರೀತಿ ಅಧಿಕಾರ ನೀಡಬಹುದು ಎಂಬುದರ ಬಗ್ಗೆ ಗಮನಹರಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next