Advertisement

ಸಿ.ಡಿಯಿಂದ, ಫೋಟೊದಿಂದಲೋ ಯೋಗೇಶ್ವರ್ ಗೆ ಬಿಜೆಪಿ ಪರಿಷತ್‌ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ

02:58 PM Feb 28, 2021 | Team Udayavani |

ಬೆಂಗಳೂರು: ಜೆಡಿಎಸ್ ಗೆ ಜೋಕರ್ ಪಕ್ಷ ಎಂದಿರುವ ಸಚಿವ ಸಿ.ಪಿ.ಯೋಗೀಶ್ವರ್ ವಿರುದ್ಧ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಸಾ.ರಾ.ಮಹೇಶ್, ಸಿ.ಡಿಯಿಂದಲೋ, ಫೋಟೊಗಳಿಂದಲೋ ಯೋಗೀಶ್ವರ್ ಗೆ ಬಿಜೆಪಿ ಪರಿಷತ್‌ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ ಎಂದು ಟಾಂಗ್ ನೀಡಿದ್ದಾರೆ.

Advertisement

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ, ಚನ್ನಪಟ್ಟಣದಲ್ಲಿ ‘ಸರ್ವಪಕ್ಷ ಸದಸ್ಯ’ ಸಿ.ಪಿ.ಯೋಗೀಶ್ವರ್ ಬೆಂಬಲಿತ ಅಭ್ಯರ್ಥಿಗಳು ಹೇಳಹೆಸರಿಲ್ಲದೇ ಸೋತಿದ್ದಾರೆ. 80% ಜೆಡಿಎಸ್‌ ಗೆದ್ದಿದೆ. ದಿನೇ ದಿನೇ ಚನ್ನಪಟ್ಟಣ ಕ್ಷೇತ್ರ ದೂರವಾಗುತ್ತಿರುವುದು ನೋಡಲಾಗದೇ ಕ್ಷೇತ್ರ ಕಳೆದುಹೋಗಿರುವ ನೋವು ತಡೆಯಲಾಗದೇ ಯೋಗೇಶ್ವರ್ ಗೆ ಮತಿ ಭ್ರಮಣೆಯಾಗಿದೆ.ಅದಕ್ಕೇ ಉರಿ ಮಾತು ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್

ಚನ್ನಪಟ್ಟಣದ ಚಕ್ಕೆರೆ ‘ಸರ್ವಪಕ್ಷ ಸದಸ್ಯ’ ಯೋಗೇಶ್ವರ್ ಹುಟ್ಟೂರು. ಯಾವುದೇ ನಾಯಕನಿಗೆ ಹುಟ್ಟೂರಿನಲ್ಲಾದರೂ ಮರ್ಯಾದೆ ಇರುತ್ತದೆ. ಆದರೆ, ಯೋಗೇಶ್ವರ್ ಗೆ ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ. ಮೊನ್ನೆ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಇಡೀ ಚಕ್ಕರೆ ಗ್ರಾಮ ಪಂಚಾಯಿತಿ ಜೆಡಿಎಸ್‌ ಬೆಂಬಲಿಸಿದೆ. ಈ ನೋವು ಆವರನ್ನು ಕಾಡುತ್ತಿರಬಹುದು ಎಂದಿದ್ದಾರೆ.

ಹುಟ್ಟೂರಲ್ಲೇ ಗೆಲ್ಲದ ಯೋಗೇಶ್ವರ್ ಕ್ಷೇತ್ರ ಗೆಲ್ಲಲು ಸಾಧ್ಯವೇ?  ಮುಂದಿನ ದಿನಗಳಲ್ಲಿ ಎಚ್‌ಡಿಕೆಯನ್ನು ಚನ್ನಪಟ್ಟಣದಿಂದ ಹೊರಹಾಕುತ್ತೇನೆ ಎಂಬ ಯೋಗೇಶ್ವರ್ ಮಾತು ವಾಸ್ತವವೇ? ಯೋಗೇಶ್ವರ್ ಲೀಲೆಗಳು ಅಲ್ಲಿನ ಜನರಿಗೆ ಮನದಟ್ಟಾಗಿವೆ. ಸಿ.ಡಿಯಿಂದಲೋ, ಫೋಟೊಗಳಿಂದಲೋ ಬಿಜೆಪಿ ಪರಿಷತ್‌ ಸ್ಥಾನ ಕೊಟ್ಟು ಮಂತ್ರಿ ಮಾಡಿದೆ.ಅದನ್ನು ಅಚ್ಚುಕಟ್ಟಾಗಿ ಮಾಡಲಿ ಎಂದು ಸಾ.ರಾ ಮಹೇಶ್ ಟೀಕಿಸಿದ್ದಾರೆ.

Advertisement

ಇದನ್ನೂ ಓದಿ: ಚಿನ್ನದ ಮೇಲೆ ಸಾಲ ಪಡೆಯುವವರಿಗೆ ವಾರ್ಷಿಕ ಶೇ7.25 ಬಡ್ಡಿದರದಲ್ಲಿ ಸಾಲ ನೀಡಲಿದೆ ಎಸ್ ಬಿ ಐ

Advertisement

Udayavani is now on Telegram. Click here to join our channel and stay updated with the latest news.

Next