Advertisement
ಇದೊಂದು ಅನೌಪಚಾರಿಕ ಸಭೆ ಎಂದು ಈಗಾಗಲೇ ನಿಗದಿಯಾಗಿತ್ತು. ಆದರೆ, ಪಾಕಿಸ್ತಾನ ಸರ್ಕಾರ ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್ ಸರ್ಕಾರದ ಪ್ರತಿನಿಧಿಗಳಿಗೆ ಈ ಸಭೆಗೆ ಆಹ್ವಾನ ನೀಡಬೇಕು ಎಂದು ಪಟ್ಟು ಹಿಡಿಯಿತು. ಅಶ್ರಫ್ ಘನಿ ನೇತೃತ್ವದ ನಿಕಟಪೂರ್ವ ಸರ್ಕಾರದ ಪ್ರತಿನಿಧಿಗಳಿಗೆ ಆಹ್ವಾನ ನೀಡಲೇಬಾರದು ಎಂದು ವಾದಿಸಿತು. ಈ ಮೂಲಕ ಅಲ್ಲಿಯೂ ಪಾಕಿಸ್ತಾನ ತನ್ನ ಕುತ್ಸಿತ ಬುದ್ಧಿಯನ್ನು ಬಿಡಲಿಲ್ಲ. ಪಾಕ್ ಪ್ರಸ್ತಾವನೆಗೆ ಭಾರತ ಸರ್ಕಾರಪ್ರಬಲವಾಗಿ ಪ್ರತಿರೋಧ ಒಡ್ಡಿತು.
ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ವಿಶ್ವಸಂಸ್ಥೆಯ 76ನೇ ಅಧಿವೇಶನದಲ್ಲಿ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ , ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕಿದ್ದಾರೆ. ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅವರು, “ಕಾಶ್ಮೀರ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಕಳೆದ 74 ವರ್ಷಗಳಿಂದ ಟರ್ಕಿ ವಹಿಸಿರುವ ಆಸ್ಥೆಗೆ ಈಗಲೂ ನಾವು ಬದ್ಧರಾಗಿದ್ದೇವೆ. ಕಾಶ್ಮಿರ ಸಮಸ್ಯೆಯ ಪಾಲುದಾರ ದೇಶಗಳನ್ನು ಕೂರಿಸಿಕೊಂಡು ಮಾತುಕತೆಯ ಮೂಲಕ ಬಗೆಹರಿಸಲು ಪ್ರಯತ್ನಿಸಲು ಟರ್ಕಿ ಸಿದ್ಧವಿದೆ’ ಎಂದಿದ್ದಾರೆ. ಕಳೆದ ವರ್ಷ ಕೂಡ ಅವರು ಇದೇ ವಿಚಾರ ಪ್ರಸ್ತಾಪಿಸಿದ್ದರು.
Related Articles
ಟರ್ಕಿ ಅಧ್ಯಕ್ಷರ ದುಃಸ್ಸಾಹಸಕ್ಕೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. 1974ರಲ್ಲಿ ಸೈಪ್ರಸ್‌ನ ಉತ್ತರ ಭಾಗವನ್ನು ಟರ್ಕಿ ಸ್ವಾಧೀನಪಡಿಸಿಕೊಂಡಿದೆ. ಆ ವಿವಾದ ಇನ್ನೂ ಇತ್ಯರ್ಥವಾಗಿಲ್ಲ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ನ್ಯೂಯಾರ್ಕ್‌ನಲ್ಲಿರುವ ಜೈಶಂಕರ್ ಸೈಪ್ರಸ್‌ನ ವಿದೇಶಾಂಗ ಸಚಿವ ನಿಕೋಸ್ ಕ್ರಿಸ್ಟೋಡುಲಿಡಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Advertisement