ತಿರುವನಂತಪುರ/ಪತ್ತನಂತಿಟ್ಟ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಪ್ರತೀ ದಿನ 90 ಸಾವಿರ ಭಕ್ತರಿಗೆ ಮಾತ್ರ ಪ್ರವೇಶ ನೀಡಲು ಕೇರಳ ಸರಕಾರ ನಿರ್ಧರಿಸಿದೆ.
ಈ ಬಗ್ಗೆ ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಆನ್‌ಲೈನ್‌ನಲ್ಲಿ 1,07,260 ಮಂದಿ ದೇಗುಲಕ್ಕೆ ಭೇಟಿ ನೀಡಲು ನೋಂದಣಿ ಮಾಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಹೆಚ್ಚುವರಿ ಭದ್ರತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪರಾಮರ್ಶೆ ನಡೆಸಲಾಯಿತು.
ಇದಲ್ಲದೆ ಈಗ ಇರುವ ಮುಂಜಾನೆ 3ರಿಂದ ರಾತ್ರಿ 11ರ ವರೆಗಿನ ದೇವರ ದರ್ಶನದ ಸಮಯವನ್ನು ರಾತ್ರಿ 12ರ ವರೆಗೆ ವಿಸ್ತರಿಸಲು ತೀರ್ಮಾನಿಸಲಾಗಿದೆ.
ನಿಳಕ್ಕಲ್‌ನಲ್ಲಿ ಇನ್ನೂ ಹೆಚ್ಚು ವಾಹನಗಳಿಗೆ ನಿಲುಗಡೆ ಕಲ್ಪಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿಯೂ ಚರ್ಚೆ ನಡೆಸಲಾಗಿದೆ.
ರವಿವಾರ ಕೇರಳ ಹೈಕೋರ್ಟ್ ನಡೆಸಿದ್ದ ವಿಚಾರಣೆ ವೇಳೆ ವಾಹನಗಳ ಪಾರ್ಕಿಂಗ್ ಮತ್ತು ಜನರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.