ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ತಮ್ಮದೇ ಆದ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ಕಾಂಗ್ರೆಸ್ ಶುಕ್ರವಾರ ತಳ್ಳಿಹಾಕಿದೆ. ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸುವುದಾಗಿ ಅದು ಪ್ರತಿಪಾದಿಸಿದೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ತಾನು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಅವರೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಪಕ್ಷವು ಒಗ್ಗಟ್ಟಾಗಿದೆ ಎಂದಿದ್ದಾರೆ. ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿದ್ದೇವೆ ಎಂದು ಪ್ರತಿಪಾದಿಸಿದರು.
ಆದರೆ ಸಚಿನ್ ಪೈಲಟ್ ಅವರು ಪ್ರಸ್ತಾಪಿಸಿದ ಸಮಸ್ಯೆಗಳ ಪರಿಹಾರವನ್ನು ಬಯಸುತ್ತಿದ್ದಾರೆ, ವಿಶೇಷವಾಗಿ ಅಶೋಕ್ ಗೆಹ್ಲೋಟ್ ಸರ್ಕಾರವು ಹಿಂದಿನ ಬಿಜೆಪಿ ಆಡಳಿತದಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಿಕಟವಾದ ಮೂಲಗಳು ತಿಳಿಸಿವೆ. ಈ ವಿಷಯಗಳ ಬಗ್ಗೆ ಹೆಚ್ಚು ಬೆಳವಣಿಗೆ ನಡೆದಿಲ್ಲ ಎಂದು ಅವರು ಹೇಳಿದರು.
ಅವರು “ತಾತ್ವಿಕ ಸ್ಥಾನವನ್ನು” ತೆಗೆದುಕೊಂಡಿದ್ದಾರೆ. ಇದು ಹುದ್ದೆಯ ವಿಚಾರವಲ್ಲ ಎಂದು ಪೈಲಟ್‌ಗೆ ನಿಕಟವಾಗಿರುವ ನಾಯಕರು ಹೇಳಿದರು. ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯ ವಿಷಯಗಳು ಅವರ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.