ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಮಣಿಪುರ ವಿಷಯದಲ್ಲಿ ಪ್ರಧಾನಿ ಮೋದಿಯವರ ಮೌನವನ್ನು ಪ್ರಶ್ನಿಸಿದ್ದಾರೆ ಮತ್ತು ಹಿಂಸಾಚಾರವನ್ನು ತಗ್ಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಮಣಿಪುರದಲ್ಲಿ ಅತ್ಯಾಚಾರ ಮತ್ತು ಕೊಲೆಗಳು ಪ್ರತಿನಿತ್ಯ ನಡೆಯುತ್ತಲೇ ಇವೆ. ‘ಕಳೆದ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಪ್ರಧಾನಿ ಮೋದಿ ಮೌನವಾಗಿರಲು ಪ್ರತಿಜ್ಞೆ ಮಾಡಿರುವಂತಿದೆ. ಬಿಜೆಪಿ ಸರ್ಕಾರ ವಿಫಲವಾಗಿದೆ. ಇಷ್ಟಾದರೂ ಪ್ರಧಾನಿ ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ.ಸಂಸತ್ತು ಕಾರ್ಯ ನಿರ್ವಹಿಸುತ್ತಿದೆ ಆದರೆ ಮಣಿಪುರದ ಬಗ್ಗೆ ಚರ್ಚಿಸಲು ಬಿಜೆಪಿ ಸಿದ್ಧವಿಲ್ಲ’ ಎಂದರು.
ಆದಾಗ್ಯೂ, ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರ ‘ಲಾಲ್ ಡೈರಿ’ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸದ ಪೈಲಟ್, ರಾಜಸ್ಥಾನದಲ್ಲಿ ಪ್ರತಿಪಕ್ಷದ ಪಾತ್ರದಲ್ಲಿಯೂ ಬಿಜೆಪಿ ವಿಫಲವಾಗಿದೆ ಎಂದು ಹೇಳಿದರು.
ಬಿಜೆಪಿ ನೇತೃತ್ವದ ಕೇಂದ್ರವು ರಾಜಸ್ಥಾನ ಸರ್ಕಾರದ ವಿರುದ್ಧ ತಾರತಮ್ಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ರಾಜಸ್ಥಾನದಲ್ಲಿ ಕಲ್ಯಾಣ ಯೋಜನೆಗಳಿಗೆ ಹಣವನ್ನು ನೀಡುತ್ತಿಲ್ಲ ಎಂದು ಹೇಳಿದರು.