Advertisement

ಕೋವಿಡ್ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್

11:15 AM Apr 02, 2021 | Team Udayavani |

ಮುಂಬೈ: ಕೆಲವು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ಸಚಿನ್ ತೆಂಡೂಲ್ಕರ್ ಈ ಮಾಹಿತಿಯನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

Advertisement

ಸಚಿನ್ ತೆಂಡೂಲ್ಕರ್ ಗೆ ಮಾರ್ಚ್ 27ರಂದು ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಬಳಿಕ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ ಇದೀಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುತ್ತೇನೆ ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.

ರೋಡ್ ಸೇಫ್ಟಿ ಟಿ20 ಕೂಟದಲ್ಲಿ ಭಾಗವಹಿಸಿದ್ದ ಸಚಿನ್ ಭಾರತ ತಂಡದ ನಾಯಕತ್ವ ವಹಿಸಿದ್ದರು. ಫೈನಲ್ ಮುಗಿದು ಒಂದು ವಾರದ ಬಳಿಕ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು. ಇದರೊಂದಿಗೆ ಆ ಪಂದ್ಯದಲ್ಲಿ ಅಡಿದ್ದ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಬದ್ರಿನಾಥ್ ಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next