Advertisement

BSFನಿಂದ ವಜಾಗೊಂಡ ಯಾದವ್ ಹರ್ಯಾಣ ಸಿಎಂ ಖಟ್ಟರ್ ವಿರುದ್ಧ ಸ್ಪರ್ಧೆ

08:29 AM Oct 01, 2019 | Nagendra Trasi |

ಚಂಡೀಗಢ್: ಬಿಎಸ್ ಎಫ್ (ಗಡಿ ಭದ್ರತಾ ಪಡೆಯ)ನಿಂದ ವಜಾಗೊಂಡಿದ್ದ ತೇಜ್ ಬಹಾದೂರ್ ಯಾದವ್  ಅವರು ಅಕ್ಟೋಬರ್ ನಲ್ಲಿ ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

Advertisement

ಭಾನುವಾರ ಪ್ರಾದೇಶಿಕ ಪಕ್ಷವಾದ ಇಂಡಿಯನ್ ನ್ಯಾಷನಲ್ ಲೋಕ ದಳಕ್ಕೆ ಯಾದವ್ ಸೇರ್ಪಡೆಯಾಗಿದ್ದರು. ಕರ್ನಲ್ ವಿಧಾನಸಭಾ ಕ್ಷೇತ್ರದಿಂದ ಹಾಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ವಿರುದ್ಧ ಅಖಾಡಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಉದ್ಯೋಗ ಸಮಸ್ಯೆ ಪ್ರಮುಖವಾಗಿದೆ ಎಂದು ಯಾದವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೇನೆಯಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಿರುವುದಾಗಿ ಆರೋಪಿಸಿ ಯಾದವ್ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಅಪ್ ಲೋಡ್ ಮಾಡಿದ್ದು, ಬಳಿಕ ಬಿಎಸ್ ಎಫ್ ನಿಂದ ವಜಾಗೊಳಿಸಲಾಗಿತ್ತು.

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತೇಜ್ ಬಹದ್ದೂರ್ ಅವರನ್ನು ಬಿ.ಎಸ್.ಪಿ., ಎಸ್.ಪಿ., ಆರ್.ಎಲ್.ಡಿ. ಪಕ್ಷಗಳ ಮಹಾಘಟಬಂಧನ್ ಅಭ್ಯರ್ಥಿಯಾಗಿ ಉತ್ತರಪ್ರದೇಶದ ವಾರಣಾಶಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಣಕ್ಕಿಳಿಸಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಉಮೇದುವಾರಿಕೆಯನ್ನು ರದ್ದುಗೊಳಿಸಿದ್ದರಿಂದ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next