Advertisement
ಶನಿವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಸ್ವಾತಂತ್ರ್ಯ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾತನಾಡಿ, ಭಾರತದ ಮೇಲೆ ದಾಳಿ ನಡೆಸಿದ ಹಲವಾರು ಸಂಸ್ಕೃತಿಗಳು ಇನ್ನೂ ಭಾರತೀಯ ಬದುಕಿನಲ್ಲಿ ಅಚ್ಚಾಗಿ ಉಳಿದಿವೆ. ದೇಶ ಉಳಿಯಲು ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಹಾಗೂ ತ್ಯಾಗ, ಬಲಿದಾನಗಳ ಸಂದೇಶಗಳನ್ನು ಪರಂಪರಾಗತವಾಗಿ ತೆಗೆದುಕೊಂಡು ಮುಂದುವರಿಯಬೇಕು ಎಂದು ತಿಳಿಸಿದರು.
ಮಹಾತ್ಮ ಗಾಂಧಿ ಭೇಟಿ ನೀಡಿದ ಕೀರ್ತಿ ಚಿಕ್ಕಮಗಳೂರು ಜಿಲ್ಲೆಗಿದ್ದು, ಅವರ ಭೇಟಿ ನೀಡಿದ ವೇಳೆ ಸ್ವಾತಂತ್ರ್ಯದ ಕಿಚ್ಚು ಹಚ್ಚುವ ಜೊತೆಗೆ ಜಿಲ್ಲೆಯಲ್ಲಿ ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದರು. ಜಿಲ್ಲೆಯ ಹಲವಾರು ಮಹಿಳೆಯರು ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮ ಆಭರಣಗಳನ್ನು ದಾನವನ್ನಾಗಿ ನೀಡಿರುವುದನ್ನು ಸ್ಮರಿಸಿಕೊಳ್ಳಬೇಕು ಎಂದರು.
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಹಲವಾರು ಅವಿಸ್ಮರಣೀಯ ಚೇತನಗಳನ್ನು ಸ್ಮರಿಸುತ್ತಾ, ಭಾರತೀಯ ನಾಗರಿಕರು ನಮಗಾಗಿ ನಾವು ರೂಪಿಸಿಕೊಂಡ ಸಂವಿಧಾನದ ಆಶಯಕ್ಕೆ ಬದ್ಧರಾಗಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿ ಭಾರತವನ್ನು ಸದೃಢ ರಾಷ್ಟ್ರವನ್ನಾಗಿ ನಿರ್ಮಾಣ ಮಾಡಬೇಕು ಎಂದರು.
ಸಮಾರಂಭದಲ್ಲಿ ದಂಡಿಯಾ ವಾಘ್, ಹಳಗಲಿ ಬೇಡರು, ವೆಂಕಟಪ್ಪ ನಾಯಕ್, ಮೈಲಾರ ಮಹದೇವ, ನರಸಿಂಗರಾಯ ಮತ್ತು ಇತರ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಈಸೂರು ಪ್ರಕರಣ ಮತ್ತು ವಿದುರಾಶ್ವಥ್ಥ ಹೋರಾಟದಂತಹ ಅನೇಕ ಸ್ವಾತಂತ್ರ್ಯ ಹೋರಾಟಗಳ ಸನ್ನಿವೇಶವನ್ನು ಸಂಕ್ಷಿಪ್ತವಾಗಿ ವಿಶ್ಲೇಷಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರದ ಕುರಿತ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು. ಸಮಾರಂಭಕ್ಕೂ ಮುನ್ನ “ಅಮೃತ ಭಾರತಿಗೆ ಕನ್ನಡದಾರತಿ’ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಸಿ. ಆನಂದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ| ಸಿ.ರಮೇಶ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗನಾಥಸ್ವಾಮಿ ಹಾಗೂ ಚಿಕ್ಕಮಗಳೂರು ತಹಶೀಲ್ದಾರ್ ವಿನಾಯಕ್ ಸಾಗರ್ ಇದ್ದರು.