ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ,ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (94) ಅವರನ್ನು ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ವಕ್ತಾರರು ಭಾನುವಾರ ತಿಳಿಸಿದ್ದಾರೆ.
ಪಂಜಾಬ್‌ನ ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ಶನಿವಾರ ರಾತ್ರಿ ವಾಂತಿ ಮಾಡಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಗ್ಯಾಸ್ಟ್ರಿಕ್ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದಅವರು ಜೂನ್ 6 ರಂದು ಇಲ್ಲಿನ PGIMER ಗೆ ದಾಖಲಾಗಿದ್ದರು. ಮರುದಿನ ಅವರನ್ನು ಡಿಸ್ಚಾರ್ಜ್ ಮಾಡಲಾಯಿತು.
ಈ ವರ್ಷದ ಆರಂಭದಲ್ಲಿ ಬಾದಲ್ ಕೋವಿಡ್-19 ಸೋಂಕಿಗೆ ಒಳಗಾಗಿದ್ದರು. ಫೆಬ್ರವರಿಯಲ್ಲಿ, ಅವರನ್ನು ಆರೋಗ್ಯ ತಪಾಸಣೆಗಾಗಿ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಹೃದಯ ಮತ್ತು ಶ್ವಾಸಕೋಶದ ತಪಾಸಣೆಗೆ ಒಳಗಾಗಿದ್ದರು.
ಇದನ್ನೂ ಓದಿ:ಹಿಮಾಚಲ ಪ್ರದೇಶ: ಕಾರು ಕಮರಿಗೆ ಬಿದ್ದು ತಂದೆ ಸಾವು, 2 ಮಕ್ಕಳಿಗೆ ಗಂಭೀರ ಗಾಯ
ಕೋವಿಡ್-19 ಸೋಂಕಿಗೆ ಒಳಗಾದ ನಂತರ ಎರಡು ವಾರಕ್ಕೊಮ್ಮೆ ಅಥವಾ ಮೂರು ವಾರಕ್ಕೊಮ್ಮೆ ಮುನ್ನೆಚ್ಚರಿಕೆ ತಪಾಸಣೆಗಳನ್ನು ಮಾಡಿಕೊಳ್ಳುವಂತೆ ಬಾದಲ್ ಅವರಿಗೆ ವೈದ್ಯರು ಈ ಹಿಂದೆ ಸಲಹೆ ನೀಡಿದ್ದರು.