Advertisement

ರೈತರ ಕಷ್ಟದ ಬಗ್ಗೆ ಗಾಯಕಿ ರಿಹಾನಾ ಗೆ ಗೊತ್ತಾ? ಕಿಡಿಕಾರಿದ ಸಚಿವ ಸದಾನಂದ ಗೌಡ

04:12 PM Feb 06, 2021 | Team Udayavani |

ಮೈಸೂರು: ಗಾಯಕಿ ರಿಹಾನಾ ಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಏನಿದೆ? ಅವರಿಗೆ ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆಯಾ? ರಿಹಾನಾ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ಕಿಡಿಕಾರಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹುಶಃ ರಿಹಾನಾ ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು. ರೈತರು ಹೇಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಾರೆಂದು ರಿಹಾನಾಗೆ ಗೊತ್ತಿದಯೇ? ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಯಾವತ್ತಾದರೂ ಭತ್ತದ ಗದ್ದೆ ನೋಡಿದ್ದಾರಾ ಹೇಳಲಿ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ, ರೈತನಿಗೆ ಇನ್ನು ಸ್ವಾತಂತ್ರ್ಯ ಸಿಕ್ಕಿಲ್ಲ. ರೈತರು ಈಗ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ರೈತನಿಗೆ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಎಂದರೆ ಕೊಡಲಿ ಬಿಡಿ. ಸುಮ್ಮನೆ ಯಾಕೆ ಹಠ ಎಂದು ಸಚಿವರು ಪ್ರಶ್ನಿಸಿದರು.

ಇದನ್ನೂ ಓದಿ:ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಗೆ ಗುದ್ದಿ ಪಲ್ಟಿಯಾದ ಕಾರು: ಚಾಲಕನಿಗೆ ಗಂಭೀರ ಗಾಯ

ರೈತರಿಗೆ ಬೆಂಬಲ ನೀಡಿದ್ದು, ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರುವುದು ಬೇಡ. ರೈತರು ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು ಎಂದು ಹೇಳಿದರು.

Advertisement

ಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಿ ಆಗಿದ್ದೇವೆ. ಮಾತುಕತೆಗೂ ಸಿದ್ಧರಿದ್ದೇವೆ. ಆದರೆ, ರೈತರೇ ಹಠ ಮಾಡುತ್ತಿದ್ದಾರೆ ಎಂದು ಸದಾನಂದ ಗೌಡ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next