ಬೆಳ್ತಂಗಡಿ: ನಾವು ಮಾಡುವ ಪ್ರತಿಯೊಂದು ಕೆಲಸ ಸಮಾಜಮುಖೀಯಾಗಿದ್ದಾಗ ನಾವೂ ಸಮಾಜದಲ್ಲಿ ಚಿರಸ್ಥಾಯಿಯಾಗಿರುತ್ತೇವೆ. ಪ್ರತಿಯೊಂದು ಮಗುವನ್ನು ಪ್ರೀತಿ – ಸಂಸ್ಕಾರ ಕೊಟ್ಟು ಬೆಳೆಸುವ ಕೆಲಸವನ್ನು ಹೆತ್ತವರು ಮಾಡಬೇಕು. ಮಕ್ಕಳಿಗಾಗಿ ಆಸ್ತಿ ಮಾಡಿಡುವ ಬದಲು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ ಎಂದು ಖ್ಯಾತ ಹಾಸ್ಯ ಕಲಾವಿದೆ, ವಾಗ್ಮಿ ಬೆಂಗಳೂರಿನ ಸುಧಾ ಬರಗೂರು ಹೇಳಿದರು.
ಅವರು ಮಂಗಳವಾರ ಬೆಳ್ತಂಗಡಿ ಮೆಸ್ಕಾಂ ರಸ್ತೆಯಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ಸದ್ಭಾವನಾ ವೇದಿಕೆ ವತಿಯಿಂದ ನಡೆದ 2016-17ನೇ ಶೆ„ಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ 10 ಸ್ಥಾನ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರನ್ನು ಗುರುತಿಸಿ ಗೌರವಿ
ಸುವ ಪ್ರತಿಭಾವಂತ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅಭಿನಂದನ ಭಾಷಣಗೈದರು.
ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಬದುಕನ್ನು ಅತ್ಯಂತ ಚೆನ್ನಾಗಿ ನಿಭಾಯಿಸುವ ಪಾಠವನ್ನು ಅಥೆ„ìಸಿ, ಬದುಕಿನ ಎಲ್ಲ ಆಯಾಮಗಳನ್ನು ಪರಿಚಯಿಸಿಕೊಂಡು ಎಲ್ಲದರಲ್ಲಿ ಸಾಧಕರಾಗಿ ಮೂಡಿಬರಬೇಕು ಎಂದರು.
ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ಬದುಕಿನ ಸಾಧನೆಯ ಗುರಿ ಮುಟ್ಟುವ ತನಕ ಹಠ ಬೆಳೆಸಿಕೊಳ್ಳಬೇಕು ಎಂದರು.
ಸದ್ಭಾವನಾ ವೇದಿಕೆ ಅಧ್ಯಕ್ಷ ದೇವಿಪ್ರಸಾದ್ ಪ್ರಸ್ತಾವಿಸಿ, ಉಪಾಧ್ಯಕ್ಷ ರಮೇಶ್ ಮಯ್ಯ ಉಜಿರೆ ಸ್ವಾಗತಿಸಿದರು. ಮಂಜುಳಾ ಡಿ. ಪ್ರಸಾದ್ ಮತ್ತು ದûಾ ಪ್ರಸಾದ್ ಸಹಕರಿಸಿದರು. ಅಜಿತ್ ಕುಮಾರ್ ಕೊಕ್ರಾಡಿ ಮತ್ತು ಶಿವಶಂಕರ ಭಟ್ ಕಾರ್ಯಕ್ರಮ ನಿರೂಪಿಸಿದರು. ಜಯಾನಂದ ಲಾ„ಲ ವಂದಿಸಿದರು.
ಈ ಸಂದರ್ಭದಲ್ಲಿ ಕಳೆದ ಶೆ„ಕ್ಷಣಿಕ ಅವಧಿಯಲ್ಲಿ ಎಸೆಸೆಲ್ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಗರಿಷ್ಠ ಅಂಕ ಗಳಿಸಿದ 10 ವಿದ್ಯಾರ್ಥಿಗಳನ್ನು, ಆಂಗ್ಲ ಮಾಧ್ಯಮದಲ್ಲಿ ಓದಿ ಗರಿಷ್ಠ ಅಂಕ ಪಡೆದ 10 ವಿದ್ಯಾರ್ಥಿಗಳನ್ನು, ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ತಲಾ 10 ವಿದ್ಯಾರ್ಥಿಗಳನ್ನು ಹೀಗೆ ಒಟ್ಟು 50 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ರೂವಾರಿ ಸದ್ಭಾವನಾ ವೇದಿಕೆಯ ಅಧ್ಯಕ್ಷ ದೇವಿಪ್ರಸಾದ್ ಅವರನ್ನು ಸಮ್ಮಾನಿಸಲಾಯಿತು.