Advertisement

ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

01:17 PM Apr 07, 2022 | Team Udayavani |

ಹೊಸದಿಲ್ಲಿ: ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷದ ಕಳೆದರೂ ಜಮ್ಮು ಕಾಶ್ಮೀರದ ಹಳ್ಳಿಯೊಂದರಲ್ಲಿ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ಈ ಹಳ್ಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ನೀಡಲಾಗಿದೆ.

Advertisement

ಜಮ್ಮು ಕಾಶ್ಮೀರದ ಉಧಂಪುರದ ಸಡ್ಡಲ್ ಎಂಬ ಹಳ್ಳಿಗೆ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ‘ಯುನೈಟೆಡ್ ಗ್ರಾಂಟ್ಸ್ ಸ್ಕೀಮ್’ ಅಡಿಯಲ್ಲಿ ಸಡ್ಡಲ್ ಹಳ್ಳಿ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಂಡಿದೆ.

ಮೇಣದ ಬತ್ತಿ ಮತ್ತು ಎಣ್ಣೆ ಬುಡ್ಡಿಗಳೇ ಇದುವರೆಗೆ ಸಡ್ಡಲ್ ಹಳ್ಳಿಯ ಜನರ ಬೆಳಕಿನ ಮೂಲವಾಗಿತ್ತು. ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಇದುವರೆಗೆ ಹಲವು ಬಾರಿಗೆ ಮನವಿ ಮಾಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ ಬಹುಕಾಲದ ಬೇಡಿಕೆಯೊಂದು ಈಗ ಪೂರ್ಣವಾಗುತ್ತಿರುವ ಬಗ್ಗೆ ಹಳ್ಳಿಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿ.ಟಿ. ರವಿ ಸರ್ಕಾರದ ಭಾಗವಲ್ಲ; ಸರ್ಕಾರ ಯಾವುದೇ ಹೇಳಿಕೆ ನೀಡಿಲ್ಲ: ಸಚಿವ ಬಿ.ಸಿ. ನಾಗೇಶ್‌

ಈ ಯೋಜನೆಯ ಯಶಸ್ಸಿಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಕಾರಣ ಎನ್ನುತ್ತಾರೆ ಗ್ರಾಮಸ್ಥರು. ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಆಡಳಿತ, ಉಧಮ್‌ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

Advertisement

“ಈಗ ನಾವು ಯಾವುದೇ ಸಮಸ್ಯೆಯಿಲ್ಲದೆ ಓದಬಹುದು. ಮೊದಲು ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಚಿಮಣಿ ದೀಪದಡಿಯಲ್ಲಿ ನಾವು ಓದಬೇಕಿತ್ತು, ಇದು ತುಂಬಾ ಸಮಸ್ಯೆಯಾಗುತ್ತಿತ್ತು” ಎನ್ನುತ್ತಾರೆ ವಿದ್ಯಾರ್ಥಿಗಳು.

Advertisement

Udayavani is now on Telegram. Click here to join our channel and stay updated with the latest news.

Next