Advertisement

ಭೋಪಾಲ್ ಕ್ಷೇತ್ರದಲ್ಲಿ ಸಾಧ್ವಿಗೆ ಗೆಲುವು , ದಿಗ್ವಿಜಯ್ ಸಿಂಗ್ ಪಡೆದ ಮತ ಎಷ್ಟು ಗೊತ್ತಾ?

04:32 PM May 24, 2019 | Nagendra Trasi |

ಮಧ್ಯಪ್ರದೇಶ: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸದ್ದು ಮಾಡಿದ್ದ ಕ್ಷೇತ್ರಗಳಲ್ಲಿ ಮಧ್ಯಪ್ರದೇಶದ ಭೋಪಾಲ್ ಕೂಡಾ ಒಂದು. ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಪರಾಜಯಗೊಳಿಸಿದ್ದಾರೆ.

Advertisement

ಸಾಧ್ವಿ ಪ್ರಜ್ಞಾ ಸಿಂಗ್ ಬರೋಬ್ಬರಿ 7,67,394 ಮತ ಪಡೆದಿದ್ದರೆ, ಕಾಂಗ್ರೆಸ್ ಪಕ್ಷದ ದಿಗ್ವಿಜಯ್ ಸಿಂಗ್ 4,55,093 ಮತ ಗಳಿಸಿ ಹೀನಾಯವಾಗಿ ಸೋಲುಂಡಿದ್ದಾರೆ. ದಿಗ್ವಿಜಯ್ ಸಿಂಗ್ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಹೊಂದಿರಲಿಲ್ಲವಾಗಿತ್ತು. ಯಾಕೆಂದರೆ ಕಳೆದ 30 ವರ್ಷಗಳಲ್ಲಿ ಕಾಂಗ್ರೆಸ್ ಇಲ್ಲಿ ಗೆಲುವು ಸಾಧಿಸಿರಲಿಲ್ಲವಾಗಿತ್ತು.

ಏತನ್ಮಧ್ಯೆ ಕಾಂಗ್ರೆಸ್ ಪಕ್ಷದ ಅಧಿಕೃತವಾಗಿ ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಮುನ್ನವೇ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರು ಭೋಪಾಲ್ ನಿಂದ ದಿಗ್ವಿಜಯ್ ಸಿಂಗ್ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿಬಿಟ್ಟಿದ್ದರು.

ದೀರ್ಘಾವಧಿಯಿಂದ ಕಾಂಗ್ರೆಸ್ ಪಕ್ಷ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಿಲ್ಲ. ಹೀಗಾಗಿ ದಿಗ್ವಿಜಯ್ ಸಿಂಗ್ ಭೋಪಾಲ್ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಕಮಲ್ ನಾಥ್ ಅಭಿಪ್ರಾಯವ್ಯಕ್ತಪಡಿಸಿದ್ದರು. ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರು ದಿಗ್ವಿಜಯ್ ಸಿಂಗ್ ಎದುರು ಸ್ಪರ್ಧಿಸಲು ನಿರಾಕರಿಸಿದ್ದರಿಂದ ಬಿಜೆಪಿ ಹೈಕಮಾಡ್ ಸಾಧ್ವಿ ಪ್ರಜ್ಞಾ ಸಿಂಗ್ ಅವರನ್ನು ಕಣಕ್ಕಿಳಿಸಿತ್ತು. ಸಾಧ್ವಿ ಪ್ರಜ್ಞಾ ಸಿಂಗ್ ದಿಗ್ವಿಜಯ್ ಸಿಂಗ್ ಅವರನ್ನು 3.50 ಲಕ್ಷ ಮತಗಳ ಭಾರೀ ಅಂತರದಿಂದ ಸೋಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next