Advertisement
ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿ, ಸಮಿತಿಯು ಎಲ್ಲ ಅಣೆಕಟ್ಟುಗಳ ಅಧ್ಯಯನ ನಡೆಸಿ ಮುಂದಿನ ಒಂದು ತಿಂಗಳ ಒಳಗಾಗಿ ವರದಿ ನೀಡುವುದು. ತುಂಗಾಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯಕ್ಕೂ ಈ ಸಮಿತಿಗೂ ಸಂಬಂಧವಿಲ್ಲ. ಉಳಿದ ವಿಚಾರದ ಬಗ್ಗೆ ವರದಿ ತಯಾರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ರೈತರು ಆತಂಕಪಡಬೇಕಾಗಿಡಲ್ಲ. ನದಿಗೆ ನೀರು ಹರಿದು ಹೋಗುವ ಬದಲು ಎಲ್ಲ ಚಾನಲ್‌ಗಳನ್ನು ತೆರೆದು ಅಲ್ಲಿಗೂ ನೀರು ಹರಿಸಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಸುರಕ್ಷತೆ ವಹಿಸಲಾಗಿದೆ. ಆಂಧ್ರ, ತೆಲಂಗಾಣ ಹಾಗೂ ವಿಪಕ್ಷದ ನಾಯಕರು ಭೇಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಅವರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿ¨ªೆ. ಅಲ್ಲದೆ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಕೇಂದ್ರ ಸಚಿವರಾದ ಸೋಮಣ್ಣ ಅವರ ಬಳಿಯೂ ಮಾತನಾಡಿ ವರದಿ ಕಳುಹಿಸಲಾಗಿದೆ. ತುಂಗಭದ್ರಾ ನೀರಾವರಿ ನಿಗಮದ ಅಧ್ಯಕ್ಷ ವೀರೇಂದ್ರ ಶರ್ಮ ಅವರಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಪ್ರಸ್ತುತ ವಿಚಾರಗಳ ಬಗ್ಗೆ ತಿಳಿಸಲಾಗಿದೆ. ಮುಂದಕ್ಕೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಹೇಳಲಾಗಿದೆ ಎಂದರು.
Related Articles
ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತೇ, ಇದರಲ್ಲಿ ಅಧಿಕಾರಿಗಳ ಲೋಪವಿದೆಯೇ ಎಂದು ಕೇಳಿದಾಗ 70 ವರ್ಷದ ಹಳೆಯ ತಂತ್ರಜ್ಞಾನ. ಎಲ್ಲ ಗೇಟ್‌ಗಳು ಸರಿಯಿವೆ. ಇದೊಂದು ಮಾತ್ರ ಒತ್ತಡ ತಡೆಯಲಾರದೆ ಅವಘಡ ಸಂಭವಿಸಿದೆ. ಇದರಲ್ಲಿ ಅಧಿಕಾರಿಗಳ ತಪ್ಪೇನಿದೆ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರಲ್ಲದೆ, ಇದು ಒಬ್ಬರನ್ನೊಬ್ಬರು ದೂಷಣೆ ಮಾಡುವಂತಹ ಸಮಯವಲ್ಲ. ನೀರು ಹಾಗೂ ಅಣೆಕಟ್ಟು ಎರಡೂ ಉಳಿಯಬೇಕು. 70 ವರ್ಷದ ಹಳೆಯ ಅಣೆಕಟ್ಟಾದ ಕಾರಣ ಈ ಅವಘಡ ನಡೆದಿದೆ. ನಮ್ಮ ಬಳಿ ಎಲ್ಲ ನಕ್ಷೆ, ದಾಖಲೆಗಳು ಇದ್ದ ಕಾರಣಕ್ಕೆ ಬೇಗ ಕೆಲಸವಾಗುತ್ತಿದೆ. ಸುರಕ್ಷತ ಸಮಿತಿ ಮೊದಲೇ ವರದಿ ಕೊಟ್ಟಿತ್ತು ಎಂಬುದು ಸುಳ್ಳು ಎಂದರು.
Advertisement
ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರೆಸ್ಟ್‌ಗೇಟ್ ಮುರಿದಿರುವ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಿರುವುದು ಸರಿಯಲ್ಲ, ಡ್ಯಾಂ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಬಿಜೆಪಿಗರು ತಿಳಿದುಕೊಳ್ಳಲಿ . ಈ ವಿಚಾರದಲ್ಲಿ ಬಿಜೆಪಿ ನಾಯಕರ ರಾಜಕಾರಣ ನೋವು ತರಿಸಿದೆ. ಜಗದೀಶ್ ಶೆಟ್ಟರ್ ಮಾಜಿ ಸಿಎಂ. ಅಂಥವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಟಿಬಿ ಡ್ಯಾಂ ಯಾರ ಅಧಿಧೀನದಲ್ಲಿದೆ ಎಂದು ಬಿಜೆಪಿ ಹೇಳಲಿ. ಕೇಂದ್ರ ಸರಕಾರದ ಅ ಧೀನದಲ್ಲಿರುವ ಅಣೆಕಟ್ಟು ನಿರ್ವಹಣೆಗೆ ಪ್ರತಿ ವರ್ಷ ರಾಜ್ಯ ಸರಕಾರ ಹಣ ಒದಗಿಸುತ್ತಿದೆ. ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಜನಾರ್ದನ ರೆಡ್ಡಿ ಅವರು, ಪ್ರಧಾನಿ ಬಳಿ ಹೋಗಿ ಅಣೆಕಟ್ಟು ನಿರ್ವಹಣೆಗೆ ತಂಡ ರಚಿಸುವಂತೆ ಕೇಳಲಿ.– ಶಿವರಾಜ್ ತಂಗಡಗಿ, ಸಚಿವ