Advertisement

Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ

02:48 PM Nov 19, 2024 | Kavyashree |

ಸಾಗರ: ಪ್ರಚೋದನಾಕಾರಿ ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಬಂಧಿಸಿ, ಸೂಕ್ತ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ನ.19ರ ಮಂಗಳವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಗೃಹಸಚಿವರಿಗೆ ಮನವಿ ಸಲ್ಲಿಸಲಾಯಿತು.

Advertisement

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬೇರೆ ಜಾತಿಧರ್ಮ ಮತ್ತು ಕಾಂಗ್ರೆಸ್ ಪಕ್ಷದವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದ ಶಾಂತಿ ಕದಡುವ ಪ್ರಯತ್ನ ನಡೆಸಿದ್ದಾರೆ. ಮುಸ್ಲಿಮರ ಓಲೈಕೆ ಹೀಗೆ ಮುಂದುವರೆಸಿದರೆ ಜನರು ದಂಗೆ ಏಳುವ ಕಾಲ ದೂರವಿಲ್ಲ. ಕಾಂಗ್ರೆಸ್ಸಿಗರನ್ನು ಹುಡುಕಿ ಹೊಡೆದು ಕೊಲ್ಲುವ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಈಶ್ವರಪ್ಪ ಅವರ ಹೇಳಿಕೆಗಳು ಸಂವಿಧಾನ ವಿರೋಧಿಯಾಗಿದೆ. ಇಂತಹ ಹೇಳಿಕೆ ಸಮಾಜದಲ್ಲಿ ಪರಸ್ಪರ ದ್ವೇಷಕ್ಕೆ ಪ್ರಚೋದನೆ ನೀಡುವುದರ ಜೊತೆಗೆ ದೇಶದ ಐಕ್ಯತೆಗೆ ಮಾರಕವಾಗಿದೆ. ಈಶ್ವರಪ್ಪ ಅವರ ಈ ಮಾತು ಶಿಕ್ಷಾರ್ಹವಾಗಿರುತ್ತದೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಕೋವಿ ಮಾತನಾಡಿದರು. ಮನವಿ ಸಲ್ಲಿಕೆ ಸಂದರ್ಭದಲ್ಲಿ ಕಲಸೆ ಚಂದ್ರಪ್ಪ, ಐ.ಎನ್.‌ ಸುರೇಶಬಾಬು, ಮಧುಮಾಲತಿ, ಉಷಾ ಎನ್., ಗಣಪತಿ ಮಂಡಗಳಲೆ, ತಾರಾಮೂರ್ತಿ, ಸಬೀನಾ, ಅನ್ವರ್ ಭಾಷಾ, ಕೃಷ್ಣಮೂರ್ತಿ, ಮೈಕೆಲ್ ಡಿಸೋಜ, ವಿಲ್ಸನ್ ಗೋನ್ಸಾಲ್ವಿಸ್, ಲಲಿತಮ್ಮ ಜ್ಯೋತಿ, ಕೋವಿ, ಜಾಕೀರ್, ರವಿಕುಮಾರ್, ಎಲ್.ಚಂದ್ರಪ್ಪ, ಅರ್ಥರ್ ಗೋಮ್ಸ್ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next