Advertisement

Sagara ; ಬೈಕ್ ಕಳವು ಪ್ರಕರಣ: ಒಂದೇ ದಿನದಲ್ಲಿ ಆರೋಪಿ ಸೆರೆ

09:04 PM Jan 05, 2024 | Shreeram Nayak |

ಸಾಗರ: ಪಟ್ಟಣದ ನೆಹರು ನಗರದ 3ನೇ ಅಡ್ಡರಸ್ತೆಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

ಜ. 3ರಂದು ನೆಹರು ನಗರದ 1ನೇ ಅಡ್ಡರಸ್ತೆ ನಿವಾಸಿ ಹಮಾಲಿ ಕೆಲಸ ಮಾಡುತ್ತಿದ್ದ ಆರೊಪಿ ಅಬ್ದುಲ್ ಬಿಲಾಲ್(25) 60 ಸಾವಿರ ಮೌಲ್ಯದ ಹೊಂಡಾ ಆಕ್ಟೀವಾ 125 ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.

ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳು ಈಗಾಗಲೇ ದಾಖಲಾಗಿವೆ.

ಪೇಟೆ ಠಾಣೆಯ ವೃತ್ತ ನಿರೀಕ್ಷಕ ಸೀತಾರಾಮ್ ಹಾಗೂ ಪಿಎಸ್‌ಐ ಟಿ.ಎಂ. ನಾಗರಾಜ್ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರತ್ನಾಕರ, ವಿಕಾಸ್, ಕೃಷ್ಣಮೂರ್ತಿ, ವಿಶ್ವನಾಥ್ ಹಾಗೂ ಶಿಲ್ಪಾರವರು ಆರೋಪಿ ಸೆರೆ ಹಿಡಿಯುವಲ್ಲಿ ಕೆಲಸ ಮಾಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next