Advertisement

Sagara: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ… ವಿದ್ಯಾರ್ಥಿನಿಯರ ಮೊರೆ

02:51 PM Nov 29, 2023 | Team Udayavani |

ಸಾಗರ: ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದ್ದು ಸರ್ಕಾರ ತಕ್ಷಣ ಅವರ ಬೇಡಿಕೆ ಈಡೇರಿಸಿ ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲು ಒತ್ತಾಯಿಸಿ ಬುಧವಾರ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಿದರು.

Advertisement

ಸಾಗರದ ಪ್ರತಿಷ್ಟಿತ ಇಂದಿರಾಗಾಂಧಿ ಕಾಲೇಜಿನಲ್ಲಿ ೩ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿನಿಯರು ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ಪಾಠ ಬೋಧನೆ ಮಾಡಲು ಪೂರ್ಣಕಾಲಿಕ ಉಪನ್ಯಾಸಕರ ಕೊರತೆ ಇದ್ದು, ಬಹುಪಾಲು ಅತಿಥಿ ಉಪನ್ಯಾಸಕರಿಂದಲೇ ತರಗತಿಗಳು ನಡೆಯುತ್ತಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.

ಪ್ರಸ್ತುತ ಅತಿಥಿ ಉಪನ್ಯಾಸಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತರಗತಿ ಬಹಿಷ್ಕರಿಸಿ ಮುಷ್ಕರದಲ್ಲಿ ನಿರತರಾಗಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮೀಪಿಸುತ್ತಿದ್ದು ಕಲಿಕೆಯಲ್ಲಿ ಹಿನ್ನಡೆಯಾಗುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅತಿಥಿ ಉಪನ್ಯಾಸಕ ಸಮಸ್ಯೆಗಳನ್ನು ಬಗೆಹರಿಸಿ ತರಗತಿಗಳು ಎಂದಿನಂತೆ ನಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಲೀನಾ, ಸಿಂಚನಾ, ಸುಚೇತ, ಅರ್ಪಿತಾ, ಅಂಕಿತಾ ಎಂ. ನಾಯ್ಕ್, ಅಕ್ಷತಾ ಕೆ.ವೈ., ಸಿಂಚನಾ, ಮೌಲ್ಯ, ಸುರೇಖ, ಚಿನ್ಮಯಿ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: ‌BCCI; ಟೀಮ್‌ ಇಂಡಿಯಾದ ಹೆಡ್‌ ಕೋಚ್‌ ಆಗಿ ಮುಂದುವರೆಯಲಿದ್ದಾರೆ ರಾಹುಲ್ ದ್ರಾವಿಡ್

Advertisement
Advertisement

Udayavani is now on Telegram. Click here to join our channel and stay updated with the latest news.

Next