ಸಾಗರ: ಇಲ್ಲಿನ ಜಂಬಗಾರು ವಾಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ರಕ್ಷಿತಾ (16) ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ವರದಿಯಾಗಿದೆ.
ಶಿವಲಿಂಗಪ್ಪ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ರಕ್ಷಿತಾ ಸೋಮವಾರ ಬೆಳಿಗ್ಗೆ ತಿಂಡಿ ತಿಂದು ಶಾಲೆಗೆ ಹೋಗುವುದಾಗಿ ಪೋಷಕರಿಗೆ ತಿಳಿಸಿ ಹೋಗಿದ್ದಳು. ರಾತ್ರಿ ಎಷ್ಟು ಹೊತ್ತಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಮಂಗಳವಾರ ಬೆಳಿಗ್ಗೆ ಗಣಪತಿ ಕೆರೆಯಲ್ಲಿ ರಕ್ಷಿತಾ ಶವ ಪತ್ತೆಯಾಗಿದ್ದು, ಸೋಮವಾರ ರಾತ್ರಿಯೇ ರಕ್ಷಿತಾ ಗಣಪತಿ ಕೆರೆಗೆ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ.
ಮೃತ ರಕ್ಷಿತಾ ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ತೀವ್ರವಾಗಿ ಆತಂಕಗೊಂಡಿದ್ದಳು. ಮನೆಯಲ್ಲಿ ಸಹ ಅಪ್ಪಅಮ್ಮನ ಬಳಿ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂದು ಹೇಳಿಕೊಂಡಿದ್ದಳು. ತಂದೆ ತಾಯಿಯರು, ಹೆದರಬೇಡ. ಧೈರ್ಯವಾಗಿರು ಎಂದು ಬುದ್ದಿ ಹೇಳಿದ್ದರು ಎನ್ನಲಾಗಿದೆ. ಆದರೂ ಧೈರ್ಯ ತಂದು ಕೊಳ್ಳದ ರಕ್ಷಿತಾ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಮಾವತಿ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ