Advertisement

ಅಂತರ್ಜಲ ಚೇತನ ಯೋಜನೆ; 23 ಕೋಟಿ ರೂ. ವೆಚ್ಚ

06:29 PM May 07, 2020 | Naveen |

ಸಾಗರ: ತಾಲೂಕಿನಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಚೇತನ ಯೋಜನೆಯಡಿ ಬೆಂಗಳೂರಿನ ಆರ್ಟ್‌ ಆಫ್‌ ಲೀವಿಂಗ್‌ ಸಂಸ್ಥೆಯ ಸಹಯೋಗದೊಂದಿಗೆ 2937 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಚ್‌. ಹಾಲಪ್ಪ ಹರತಾಳು ತಿಳಿಸಿದರು.

Advertisement

ತಾಲೂಕಿನ ಪಡವಗೋಡು ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಬುಧವಾರ ಬೋಲ್ಡರ್ ಚೆಕ್‌ ಡ್ಯಾಂ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ 1455 ಕಲ್ಲುಗುಂಡು ತಡೆ ಯೋಜನೆ, 1423 ಇಂಗು ಬಾವಿ ನಿರ್ಮಾಣ, 32 ಇಂಗು ಕೊಳವೆ ಬಾವಿ, 27 ಕೆರೆಹೊಂಡ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಂದಿನಿಂದ ರಾಜ್ಯದ 9 ಆಯ್ದ ಜಿಲ್ಲೆಗಳಲ್ಲಿ ಅಂತರ್ಜಲ ಪುನಶ್ಚೇತನ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಪಡವಗೋಡು ಗ್ರಾಪಂ ಅಧ್ಯಕ್ಷ ಪಿ.ಡಿ. ಬಂಗಾರಪ್ಪ, ತಾಪಂ ಸದಸ್ಯರಾದ ದೇವೇಂದ್ರಪ್ಪ ಯಲಕುಂದ್ಲಿ, ಸವಿತಾ ನಟರಾಜ್‌, ಗ್ರಾಪಂ ಸದಸ್ಯರಾದ ವೆಂಕಟೇಶ್‌, ನಾಗರಾಜ್‌, ರೇಣುಕಾ ರಾಜಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್‌, ಎನ್‌ ಆರ್‌ಇಜಿ ಸಹಾಯಕ ನಿರ್ದೇಶಕ ಬಾಲಸುಬ್ರಹ್ಮಣ್ಯ, ಪಿಡಿಒ ರಾಘವೇಂದ್ರ, ಆರ್ಟ್‌ ಆಫ್‌ ಲೀವಿಂಗ್‌ ಸಂಸ್ಥೆಯ ಶ್ರೀನಿವಾಸ್‌, ಭಾಗ್ಯದರ್ಶಿನಿ, ದತ್ತಮೂರ್ತಿ ಇನ್ನಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next