ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರುಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುವಂತೆನೀಡಿರುವ ಆಹ್ವಾನವನ್ನು ನಾನು ಸ್ವೀಕರಿಸಿದ್ದು, ಫೆ.13ರಂದು ನಾನು ಧರ್ಮಸ್ಥಳದ ಮಂಜುನಾಥೇಶ್ವರಸನ್ನಿಧಾನದಲ್ಲಿ ನಾನು ಮರಳು ಸಾಗಾಣಿಕೆದಾರರಿಂದನಯಾಪೈಸೆ ತೆಗೆದುಕೊಂಡಿಲ್ಲ ಎಂದು ಪ್ರಮಾಣಮಾಡಲು ಸಿದ್ದನಿದ್ದೇನೆ ಎಂದು ಶಾಸಕ ಎಚ್.ಹಾಲಪ್ಪಹರತಾಳು ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈಚೆಗೆ ಮಾಜಿ ಶಾಸಕರು ನಾನು ಮರಳು ಸಾಗಾಣಿಕೆದಾರರಿಂದಹಣ ಪಡೆದಿದ್ದೇನೆ ಎಂದು ಆರೋಪಿಸಿದ್ದರು. ಜೊತೆಗೆ ನಾನುಹಣ ತೆಗೆದುಕೊಂಡಿಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣಮಾಡಲಿ ಎಂದು ಸವಾಲು ಎಸೆದಿದ್ದಾರೆ. ಅವರ ಸವಾಲನ್ನುನಾನು ಸ್ವೀಕರಿಸಿದ್ದೇನೆ. ಇದಕ್ಕಾಗಿ ಫೆ. 13ಕ್ಕೆ ದಿನಾಂಕ ನಿಗದಿಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿರುವ ಮಾಜಿಶಾಸಕರು ಧರ್ಮಸ್ಥಳಕ್ಕೆ ಬರಬೇಕು ಎಂದು ಹೇಳಿದರು.
ನಾನು ಮತ್ತು ನನ್ನ ಕುಟುಂಬಸ್ಥರು ಮರಳುಸಾಗಾಣಿಕೆದಾರರಿಂದ ಒಂದು ಪೈಸೆ ಕಮೀಷನ್ ಪಡೆದಿಲ್ಲ.ಮರಳು ಸಾಗಾಣಿಕೆದಾರರಿಂದ, ಪೊಲೀಸರಿಂದ ಹಣಪಡೆಯುವಷ್ಟು ಸಣ್ಣ ರಾಜಕಾರಣಿ ನಾನಲ್ಲ. ಆದರೆ ಅವರುಶಾಸಕರಾಗಿದ್ದ ಸಂದರ್ಭದಲ್ಲಿ ಗಣಪತಿ ಗುಡಾಜಿ ಎನ್ನುವಪೊಲೀಸ್ ಇನ್ಸ್‌ಪೆಕ್ಟರ್ ಮುಂದಿರಿಸಿಕೊಂಡುಕಮಿಷನ್ ಪಡೆದು ಅಭ್ಯಾಸವಾಗಿ ಹೋಗಿದೆ. ಇದೀಗನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ನಾನು ಹಣಪಡೆದಿಲ್ಲ ಎಂದು ಪ್ರಮಾಣ ಮಾಡುವ ಜೊತೆಗೆಮಾಜಿ ಶಾಸಕರು ತಾವು ಸಹ ತಮ್ಮ ಅವ ಧಿಯಲ್ಲಿಮರಳು ಸಾಗಾಣಿಕೆದಾರರಿಂದ ಕಮಿಷನ್ ಪಡೆದಿಲ್ಲಎಂದು ಪ್ರಮಾಣ ಮಾಡಬೇಕು.
ನನಗೆ ಯಾರಾದರೂ ಮರಳುಸಾಗಾಣಿಕೆದಾರರು ಕಮಿಷನ್ ಕೊಟ್ಟಿದ್ದರೆ ಅವರು ಸಹ ಬಂದುಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.ಕೆಲವು ದಿನಗಳ ಹಿಂದೆ ಲಿಂಗನಮಕ್ಕಿ ಜಲಾಶಯದಿಂದಹೆಚ್ಚಿನ ನೀರು ಬಿಟ್ಟು ನಾನು ಕಮೀಷನ್ ಪಡೆಯುತ್ತಿದ್ದೇನೆಎಂದು ಮಾಜಿ ಶಾಸಕರು ಆರೋಪ ಮಾಡಿದ್ದರು.ಇದೀಗ ಮರಳು ಸಾಗಾಣಿಕೆದಾರರಿಂದ ಕಮಿಷನ್‌ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.
ಒಂದರ್ಥದಲ್ಲಿ ಮಾಜಿಶಾಸಕರದ್ದು ಹಿಟ್ ಆ್ಯಂಡ್ ರನ್ ಸಂಸ್ಕೃತಿ. ನೀರು ಹೆಚ್ಚುಬಿಟ್ಟರೆ ನನಗೆ ಹೇಗೆ ಕಮಿಷನ್ ಬರುತ್ತದೆ? ಮಾಜಿ ಶಾಸಕರುಯಾವುದೇ ಮಾಹಿತಿ ಇರಿಸಿಕೊಳ್ಳದೆ ವೃಥಾ ಆರೋಪಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮಾಜಿ ಶಾಸಕರ ಇಂತಹಆರೋಪಗಳಿಗೆ ಉತ್ತರ ನೀಡದೆ ನಿರ್ಲಕ್ಷé ಮಾಡುತ್ತೇನೆ ಎಂದುಹೇಳಿದರು.ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಬಗ್ಗೆ ನನಗೆ ಅಪಾರಗೌರವವಿದೆ. ಇರುವಕ್ಕಿ ರೈತಪರ ಹೋರಾಟ ಸಂದರ್ಭದಲ್ಲಿಕಂದಾಯ ಇಲಾಖೆ ಅ ಧಿಕಾರಿಗಳು ಪೊಲೀಸ್ ಬಂದೋಬಸ್ತಿನಲ್ಲಿಮೂರು ಬಡ ಬ್ರಾಹ್ಮಣ ಕುಟುಂಬವನ್ನು ಒಕ್ಕಲೆಬ್ಬಿಸುವಪ್ರಯತ್ನ ನಡೆಸಿದ್ದರು.
ಕಂದಾಯ ಇಲಾಖೆ ಅ ಧಿಕಾರಿಗಳುದೀವರು, ಲಿಂಗಾಯಿತರು ಅಲ್ಲಿದ್ದರೆ ಒಕ್ಕಲೆಬ್ಬಿಸುತ್ತಿರಲಿಲ್ಲ. ಈಸಂದರ್ಭದಲ್ಲಿ ಲೋಕಾಭಿರಾಮವಾಗಿ ಕಾಗೋಡು ತಿಮ್ಮಪ್ಪಅವರಿಗೆ ವಯಸ್ಸಾಗಿದೆ, ಏನು ಗೊತ್ತಾಗುವುದಿಲ್ಲ ಬಿಡಿಎಂದು ಹೇಳಿದ್ದೇನೆ. ಕೆಲವರು ಅದನ್ನು ಬೇರೆ ರೀತಿ ತಿರುಚಲುಪ್ರಯತ್ನ ನಡೆಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಷ್ಟ್ರೀಯಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ನಾನು ಮರ ಕಡಿತಲೆಮಾಡುತ್ತಿರುವುದು ಸಿಗಂದೂರು ದೇವರ ಆಣೆಯಾಗೂ ನನಗೆಬೇಸರ ತರುತ್ತಿದೆ ಎಂದು ಹೇಳಿದ್ದೇನೆಯೇ ವಿನಃ ಸಿಗಂದೂರುದೇವರ ಆಣೆಗೂ ಮರ ಕಡಿತಲೆ ಮಾಡಿಸುವುದಿಲ್ಲ ಎಂದುಎಲ್ಲೂ ಹೇಳಿಲ್ಲ. ಅಭಿವೃದ್ಧಿ ಆಗಬೇಕು ಎನ್ನುವ ಹಿನ್ನೆಲೆಯಲ್ಲಿಮರ ಕಡಿತಲೆ ಆದಷ್ಟು ಕಡಿಮೆ ಮಾಡಲು ಎಲ್ಲ ಪ್ರಯತ್ನನಡೆಸಲಾಗುತ್ತಿದೆ ಎಂದು ಹೇಳಿದರು. ಗೋಷ್ಠಿಯಲ್ಲಿ ಬಿಜೆಪಿಗ್ರಾಮಾಂತರ ಘಟಕದ ಅಧ್ಯಕ್ಷ ಲೋಕನಾಥ್ ಬಿಳಿಸಿರಿ,ನಗರ ಅಧ್ಯಕ್ಷ ಗಣೇಶಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್, ಎಪಿಎಂಸಿ ಅಧ್ಯಕ್ಷಚೇತನರಾಜ್ ಕಣ್ಣೂರು, ಪ್ರಮುಖರಾದ ಸಂತೋಷ್ ಶೇಟ್,ಸತೀಶ್ ಕೆ., ರವೀಂದ್ರ ಬಿ.ಟಿ. ಇನ್ನಿತರರು ಇದ್ದರು.