ಸಾಗರ: ವ್ಯಕ್ತಿಯೊಬ್ಬರು ಕಾಲು ಜಾರಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಳೇಗಾರಿನಲ್ಲಿ ನಡೆದಿದೆ. 57 ವರ್ಷದ ಅವಿವಾಹಿತ ಮಧುಕೇಶ ಭಟ್ ಮೃತ ದುರ್ದೈವಿಯಾಗಿದ್ದಾರೆ.
ಪೂಜೆಗೆಂದು ಮನೆಯ ಹಿಂಭಾಗದಲ್ಲಿರುವ ಬಾವಿಯಲ್ಲಿ ನೀರು ಸೇದುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಗಮನಿಸಿ ಅಗ್ನಿ ಶಾಮಕ ದಳದವರಿಗೆ ಕರೆಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ. ಮೃತದೇಹವನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
ಮಧುಕೇಶ ಈ ಹಿಂದಿನ ಜನತಾ ಪರಿವಾರದಲ್ಲಿ ಗುರ್ತಿಸಿಕೊಂಡಿದ್ದರು. ಗ್ರಾಮದ ದೇವಸ್ಥಾನದ ಪೂಜೆಯನ್ನೂ ನಡೆಸುತ್ತಿದ್ದರು.
ಇದನ್ನೂ ಓದಿ: ಕೊಪ್ಪದಲ್ಲೊಂದು ಲವ್ ಜಿಹಾದ್ ಪ್ರಕರಣ: ನೊಂದ ಯುವತಿಯಿಂದ ಠಾಣೆಗೆ ದೂರು