Advertisement

Sagara: ವಿದ್ಯಾರ್ಥಿನಿ ಆತ್ಮಹತ್ಯೆ; ಪ್ರಚೋದನೆ ನೀಡಿದ ಆರೋಪಿ ಬಂಧನ

09:41 AM Jul 13, 2023 | Kavyashree |

ಸಾಗರ: ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisement

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ ಭವ್ಯಾ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಆನವಟ್ಟಿ ಸಮೀಪದ ಹುರಳಿಕೊಪ್ಪ ಗ್ರಾಮದ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಬುಧವಾರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ ಪದೇ ಫೋನ್ ಮಾಡಿ ಪ್ರೀತಿಸುವಂತೆ ಪ್ರದೀಪ್ ಪೀಡಿಸುತ್ತಿದ್ದ ಎಂದು ಭವ್ಯಾ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದಳು ಎನ್ನಲಾಗಿದೆ.

ಪ್ರದೀಪನ ಹಿಂಸೆ ತಾಳಲಾರದೆ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಹೋದರ ಕೃಷ್ಣಮೂರ್ತಿ ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next