Advertisement

Sagara; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!: ಆರೋಪಿ ಬಂಧನ

08:38 PM Aug 31, 2023 | Team Udayavani |

ಸಾಗರ: ಪಿಯು ಓದುತ್ತಿದ್ದ ವಿದ್ಯಾರ್ಥಿನಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರವೇ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗುತ್ತಿದ್ದ ವಿಷಯ ಬಹಿರಂಗವಾದ ಘಟನೆ ಮಂಗಳವಾರ ನಡೆದಿದೆ.

Advertisement

ಸೊರಬದಲ್ಲಿ ಓದುತ್ತಿರುವ 22 ವರ್ಷದ ಆರೋಪಿ ಸಾಗರದಲ್ಲಿ ಪಿಯು ಓದುತ್ತಿರುವ ವಿದ್ಯಾರ್ಥಿನಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಂದು ತನ್ನ ಮೇಲೆ ಕಳೆದೊಂದು ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ಎಸಗುತ್ತಿದ್ದ. ಇದರಿಂದಾಗಿ ತಾನು ಗರ್ಭ ಧರಿಸಿದ್ದಾಗಿಯೂ ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಎರಡು ಮೂರು ದಿನದ ಹಿಂದೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹುಡುಗಿಯನ್ನು ಪೋಷಕರು ಚಿಕಿತ್ಸೆಗೆ ಆಸ್ಪತ್ರೆಗೆ ಕರೆ ತಂದಾಗ ಗರ್ಭವತಿಯಾಗಿರುವುದು ಪತ್ತೆಯಾಗಿದೆ. ಬಳಿಕ ಆಕೆ ಸಾಗರದ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಹುಡುಗಿ ನೀಡಿದ ದೂರಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬುಧವಾರ ಬಂಧಿಸಿ, ಪೋಕ್ಸೋ ಕೇಸ್ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next