Advertisement

ಪಿಯು ಇಂಗ್ಲಿಷ್‌ ಪರೀಕ್ಷೆಗೆ ಸಜ್ಜು

06:55 PM Jun 18, 2020 | Naveen |

ಸಾಗರ: ತಾಲೂಕಿನಲ್ಲಿ ಜೂ. 18ರಂದು ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ನಡೆಸಲು ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ತಾಲೂಕಿನಲ್ಲಿ 5 ಪರೀಕ್ಷಾ ಕೇಂದ್ರಗಳಿದ್ದು ಒಟ್ಟು 2,606 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Advertisement

ತಾಲೂಕಿನ 22 ವಿದ್ಯಾರ್ಥಿಗಳು ಹೊರ ಜಿಲ್ಲೆಗಳಲ್ಲಿನ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದ 120 ವಿದ್ಯಾರ್ಥಿಗಳು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಆನಂದಪುರ ಸರ್ಕಾರಿ ಪಪೂ ಕಾಲೇಜಿನಲ್ಲಿ 216, ನಗರದ ಬಿ.ಎಚ್‌. ರಸ್ತೆಯ ಸರ್ಕಾರಿ ಪಪೂ ಕಾಲೇಜಿನಲ್ಲಿ 1,208, ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ 529, ಎಂಡಿಎಫ್‌ ಕಾಲೇಜಿನಲ್ಲಿ 549 ಹಾಗೂ ಜೋಗದ ಕವಿನಿನಿ ಪಪೂ ಕಾಲೇಜಿನಲ್ಲಿ 104 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಗ್ರಾಮಾಂತರದ ಭಾಗಗಳಿಂದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬರಲು 17 ಕೆಎಸ್‌ ಆರ್‌ಟಿಸಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ದೇಹ ತಾಪಮಾನ ಪರೀಕ್ಷೆಯ ನಂತರ ಹೆಚ್ಚಿನ ತಾಪಮಾನ ಕಾಣಿಸಿದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಯನ್ನು ಬಿ.ಎಚ್‌. ರಸ್ತೆಯ ಸರ್ಕಾರಿ ಪಪೂ ಕಾಲೇಜಿನಲ್ಲಿ ಮಾಡಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next