Advertisement
ನಗರದ ಸಾಗರ ಜಂಬಗಾರು ರೈಲ್ವೆ ನಿಲ್ದಾಣದ ಬಳಿ ಮಲೆನಾಡು ರೈಲ್ವೆ ಹೋರಾಟ ಸಮಿತಿ ವತಿಯಿಂದ ತಾಳಗುಪ್ಪದಿಂದ ಕೋಟೆಗಂಗೂರಿಗೆ ರೈಲ್ವೆ ಟರ್ಮಿನಲ್ ಸ್ಥಳಾಂತರಿಸಿರುವುದನ್ನು ಖಂಡಿಸಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.
Related Articles
Advertisement
ರೈಲ್ವೆ ಹೋರಾಟ ಸಮಿತಿ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ|ನಾ.ಡಿಸೋಜಾ ಮಾತನಾಡಿ, ಕೇಂದ್ರ ರೈಲ್ವೆ ಇಲಾಖೆ ತಾಳಗುಪ್ಪದಲ್ಲಿ ಟರ್ಮಿನಲ್ ಮಾಡಲು ಸೂಕ್ತ ಜಾಗವಿದೆ ಎಂದು ತೀರ್ಮಾನಿಸಿದಾಗ ರೈಲ್ವೆ ಹೋರಾಟ ಸಮಿತಿ ಅದನ್ನು ತಡೆಯಲು ಸಾಕಷ್ಟು ಪ್ರಯತ್ನ ನಡೆಸಿದೆ. ಹೋರಾಟ ಸುದೀರ್ಘವಾದದ್ದು. ನಿರಂತರವಾದ ಹೋರಾಟ ಇರಲಿ. ಯಾವುದೇ ಕಾರಣಕ್ಕೂ ನಿರಾಶೆ ಹೊಂದುವುದು ಬೇಡ ಎಂದು ತಿಳಿಸಿದರು.
ತಾಪಂ ಅಧ್ಯಕ್ಷ ಬಿ.ಎಚ್.ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ಸಂಸದರ ಮಾತುಗಳು ನಂಬಿಕೆಗೆ ಅರ್ಹವಲ್ಲ. ಶಿವಮೊಗ್ಗದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಸಂದರ್ಭದಲ್ಲಿ ನಾನು ವಿಷಯ ಪ್ರಸ್ತಾಪಿಸಿದಾಗ, ಇನ್ನೂ ನಿರ್ಧಾರ ಆಗಿಲ್ಲ ಎಂದು ಹೇಳುತ್ತಾರೆ. ನೂರಾರು ರೈಲ್ವೆ ಅಧಿಕಾರಿಗಳು ಟರ್ಮಿನಲ್‌ನಲ್ಲಿ ಕೆಲಸ ಮಾಡಬೇಕಾಗಿದ್ದು, ಅವರು ತಾಳಗುಪ್ಪದಲ್ಲಿ ಕೆಲಸ ಮಾಡಲು ಹಿಂಜರಿಯುತ್ತಾರೆ. ಹಾಗಾಗಿ ಟರ್ಮಿನಲ್ ಅಲ್ಲಿ ಆಗುವುದು ಕಷ್ಟ ಎಂದು ತಿಳಿಸುತ್ತಾರೆ. ಜನಪರವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕೇ ವಿನಃ ಅಧಿಕಾರಿಗಳ ಅನುಕೂಲಕ್ಕಾಗಿ ಅಲ್ಲ ಎಂಬುದೇ ಇವರಿಗೆ ಅರಿವಿದ್ದಂತಿಲ್ಲ ಎಂದು ಟೀಕಿಸಿದರು.
ಜಿಪಂ ಮಾಜಿ ಸದಸ್ಯ ರವಿ ಕುಗ್ವೆ, ಉತ್ತರ ಕನ್ನಡ ರೈತ ಸಂಘದ ಅಧ್ಯಕ್ಷ ವೀರಭದ್ರಪ್ಪ, ಜಿಪಂ ಸದಸ್ಯೆ ಅನಿತಾಕುಮಾರಿ ಇತರರು ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್, ಎಪಿಎಂಸಿ ಅಧ್ಯಕ್ಷ ರವಿಕುಮಾರ್ ಹುಣಾಲಮಡಿಕೆ, ಬಳಕೆದಾರರ ವೇದಿಕೆ ಕಾರ್ಯದರ್ಶಿ ಜನಾರ್ದನ ರಾವ್ ಹಕ್ರೆ, ಬಿ.ಆರ್. ಜಯಂತ್, ನಂದಾ ಗೊಜನೂರು, ಶಿವಾನಂದ ಕುಗ್ವೆ, ಜಯಲಕ್ಷ್ಮೀ ನಾರಾಯಣಪ್ಪ, ಕುಮಾರಸ್ವಾಮಿ, ಚೂಡಾಮಣಿ ರಾಮಚಂದ್ರ, ಮಹಾಬಲೇಶ್ವರ ಕುಗ್ವೆ, ಸುಳಗೋಡು ಗಣಪತಿ, ದಳವಾಯಿ ದಾನಪ್ಪ ಇನ್ನಿತರರು ಇದ್ದರು.
ಹೋರಾಟ ಸಮಿತಿಯ ಪರಮೇಶ್ವರ ದೂಗೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ.ಎನ್. ಹುಬ್ಬಳ್ಳಿ ಹಾಗೂ ವಸಂತ್ ಕುಗ್ವೆ ಕ್ರಾಂತಿಗೀತೆ ಹಾಡಿದರು. ಎ.ಎಸ್. ಶೇಟ್ ಸ್ವಾಗತಿಸಿದರು. ಕೆ.ಎನ್. ವೆಂಕಟಗಿರಿ ಹಕ್ಕೊತ್ತಾಯ ಪತ್ರ ವಾಚಿಸಿದರು. ಸುಧಾಕರ ಕುಗ್ವೆ ನಿರೂಪಿಸಿದರು. ಈ ಸಂದರ್ಭದಲ್ಲಿ ಇದಕ್ಕೂ ಮೊದಲು ಮಹಾಗಣಪತಿ ದೇವಸ್ಥಾನದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.