Advertisement
ಸೋಮವಾರ ಸುದ್ದಿಗಾರರರೊಂದಿಗೆ ಮಾತನಾಡಿ, ವಿವಿಧ ಭೂ ಸಮಸ್ಯೆ ನಿವಾರಣೆಗೆ ಒತ್ತಾಯಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ನಮ್ಮ ಬೆಂಬಲವಿದೆ. ಈಗಾಗಲೇ ನಮ್ಮ ಪಕ್ಷದವರೂ ಸೇರಿದಂತೆ ಎಲ್ಲಾ ಪಕ್ಷಗಳ ಪ್ರಮುಖರು ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ರೈತರಿಂದ ಅಹವಾಲು ಸ್ವೀಕರಿಸಿದ್ದಾರೆ. ನಾನು ಮುಖ್ಯಮಂತ್ರಿ, ಅರಣ್ಯ ಸಚಿವರಿಗೆ ರೈತರ ಸಮಸ್ಯೆ ತಿಳಿಸಿ ಸೂಕ್ತ ಪರಿಹಾರ ನೀಡಲು ಮನವಿ ಮಾಡಿದ್ದೇನೆ. ಈಗಾಗಲೇ ಮೂರು ಎಕರೆಯೊಳಗೆ ಸಾಗುವಳಿ ಮಾಡುತ್ತಿರುವವರ ಒಕ್ಕಲೆಬ್ಬಿಸಬಾರದು ಎಂದು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ ಎಂದರು.
ಉಪ ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು ಉತ್ತಮ ಕೆಲಸ ಮಾಡುತ್ತಿದ್ದು ಮತದಾರರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡಿ ಗೆಲ್ಲಿಸುತ್ತಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಬಂದಿರುವುದು ಹೆಚ್ಚು ಶಕ್ತಿ ತಂದಿದ್ದು, ಸಿ.ಪಿ.ಯೋಗೇಶ್ವರ್ ಗೆಲುವು ಖಚಿತ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಲಸೆ ಚಂದ್ರಪ್ಪ, ಗಣಪತಿ ಮಂಡಗಳಲೆ, ಅಶೋಕ ಬೇಳೂರು, ಲಲಿತಮ್ಮ, ಮಧುಮಾಲತಿ, ಜಾಕೀರ್, ತಾರಾಮೂರ್ತಿ ಇನ್ನಿತರಿದ್ದರು.