Advertisement

Tragedy: SSLC ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ

02:50 PM Mar 25, 2024 | Team Udayavani |

ಸಾಗರ : ಸೋಮವಾರ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮದ ಪರಶುರಾಮ್ (16) ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ಓದುತ್ತಿದ್ದರು. ಸೋಮವಾರ ಬೆಳಿಗ್ಗೆ ಪರೀಕ್ಷೆಗೆ ಹೋಗಲು ಭಾನುವಾರ ತಯಾರಿ ನಡೆಸಿಕೊಂಡಿದ್ದರು. ಬೆಳಿಗ್ಗೆ ಮಗನನ್ನು ಎಬ್ಬಿಸಲು ಪೋಷಕರು ರೂಮಿಗೆ ಹೋದಾಗ ಪರಶುರಾಮ್ ಕಂಬಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂದು ತಿಳಿದು ಬಂದಿಲ್ಲ. ಆನಂದಪುರಂ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಯುವರಾಜ್ ತಮ್ಮ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Lok Sabha Polls: ಪತ್ನಿಗೆ ತಪ್ಪಿದ ಟಿಕೆಟ್… ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಶಾಸಕ

Advertisement

Udayavani is now on Telegram. Click here to join our channel and stay updated with the latest news.

Next