ಸಾಗರ: ಮದುವೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ಊಟ ಮಾಡುತ್ತಿರವ ಸಂದರ್ಭದಲ್ಲಿ ಮಹಿಳೆಯ ಪರ್ಸ್ ಕಳ್ಳತನವಾಗಿರುವ ಘಟನೆ ಭಾನುವಾರ (ಜೂನ್ 12) ನಡೆದಿದೆ.
Advertisement
ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಲಕ್ಷ್ಮೀ ವೆಂಕಟರಮಣ ಸಭಾಭವನದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಮೈಸೂರು ಮೂಲದ ಮಹಿಳೆ ಪರ್ಸ್ ಕಳ್ಳತನವಾಗಿದೆ. ಭಾನುವಾರ ಮಧ್ಯಾಹ್ನ ಊಟ ಮಾಡುವ ಸಂದರ್ಭದಲ್ಲಿ ಮಹಿಳೆಯ ಪರ್ಸ್ ನಾಪತ್ತೆಯಾಗಿದ್ದು, ಇದರಲ್ಲಿ ಒಟ್ಟು 50 ಸಾವಿರ ರೂ. ಮೌಲ್ಯದ ಬಂಗಾರದ ಸರ, ಕಿವಿ ಓಲೆ ಹಾಗೂ ಪಾನ್ ಕಾರ್ಡ್ ಇತ್ತು ಎಂದು ಮಹಿಳೆ ತಿಳಿಸಿದ್ದಾರೆ.
ಈ ಕುರಿತು ಮಹಿಳೆ ಸಾಗರ ನಗರ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿದ್ದಾರೆ.