Advertisement

ನಾಗಮಾರಪಳ್ಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

05:14 PM Nov 18, 2020 | Suhan S |

ಬೀದರ: ನಗರದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ 67ನೇ ಅಖೀಲ ಭಾರತ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಿದರು. ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಇರುವ ಉಮಾಕಾಂತನಾಗಮಾರಪಳ್ಳಿ ಜಿಲ್ಲಾಮಟ್ಟದಿಂದ ರಾಜ್ಯಮಟ್ಟದವರೆಗಿನ ವಿವಿಧ ಹುದ್ದೆ ಸಮರ್ಥವಾಗಿ ನಿಭಾಯಿಸಿದ್ದಾರೆ.

ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ, ಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ, ರಾಜ್ಯಸಹಕಾರ ಮಹಾಮಂಡಳ ನಿರ್ದೇಶಕ  ಹಾಗೂ ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಎರಡನೇ ಅವಧಿ ಗೆ ಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿದ್ದಾರೆ. ಪ್ರಸ್ತುತಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕ, ಸಹಕಾರ ವಸತಿ ಮಹಾಮಂಡಳ ನಿರ್ದೇಶಕಹಾಗೂ ಕರ್ನಾಟಕ ಸಹಕಾರ ಗ್ರಾಹಕರ ಮಹಾಮಂಡಳದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಸಹಕಾರ ಚಳವಳಿ ಬಲಗೊಳಿಸಲು ಹಾಗೂ ಜಿಲ್ಲೆಯ ಜನರ ಅರ್ಥಿಕ ಮಟ್ಟ ಸುಧಾರಿಸಲು ಅವಿರತ ಶ್ರಮಿಸುತ್ತಿದ್ದಾರೆ. ತಂದೆ ಹಾಕಿಕೊಟ್ಟ ದಾರಿಯಲ್ಲೇ ಡಿಸಿಸಿ ಬ್ಯಾಂಕ್‌ ಯಶಸ್ವಿಯಾಗಿಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಡಿಸಿಸಿ ಬ್ಯಾಂಕ್‌ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್‌ ಸೇವೆ ಒದಗಿಸಲು ಎಟಿಎಂ ಹೊಂದಿರುವ ಸುಸಜ್ಜಿತ ಮೊಬೈಲ್‌ ಬ್ಯಾಂಕಿಂಗ್‌ ವ್ಯಾನ್‌, ಎಟಿಎಂ ಸೇವೆ ಶುರು ಮಾಡಿದ ಶ್ರೇಯಸ್ಸು ಉಮಾಕಾಂತ ನಾಗಮಾರಪಳ್ಳಿ ಅವರಿಗೆ ಸಲ್ಲುತ್ತದೆ. ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಯಡಿ ಬೆಳೆ ನೋಂದಣಿಯಲ್ಲಿ ಬ್ಯಾಂಕ್‌ ದೇಶದ ಸಹಕಾರ ಬ್ಯಾಂಕ್‌ಗಳಲ್ಲೇ ಮೊದಲ ಸ್ಥಾನದಲ್ಲಿರುವುದು ಅವರ ರೈತ ಸ್ನೇಹಿ ಕಾರ್ಯಕ್ಕೆ ಹಿಡಿದ ಕೈಗನ್ನಡಿ.

ಗಣ್ಯರ ಉಪಸ್ಥಿತಿ: ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್‌.ಅಶೋಕ, ನಗರಾಭಿವೃದ್ಧಿ ಸಚಿವ ಭೈರತಿಬಸವರಾಜ, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.

Advertisement

ಸಹಕಾರ ಸಚಿವರ ಪ್ರಶಂಸೆ : ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ಕಾರ್ಯಶೈಲಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಉಮಾಕಾಂತ ಅವರು ಸಹಕಾರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಕಲಬುರ್ಗಿ ವಿಭಾಗದಲ್ಲೇ ಬೀದರನಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮ ಮಾದರಿಯಾಗಿ ಸಂಘಟಿಸಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next