ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ವತಿಯಿಂದ ನಡೆದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಹಕಾರಿ ಧುರೀಣ ಕೆ.ಪಿ.ಬಚ್ಚೇಗೌಡ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ರೈತಪರ ನಾಯಕ ದಿವಂಗತ ಕೆ.ಬಿ. ಪಿಳ್ಳಪ್ಪ ನವರ ಪುತ್ರ ಕೆ.ಪಿ. ಬಚ್ಚೇಗೌಡ ಚಿಕ್ಕಬಳ್ಳಾಪುರ ಪಿ.ಎಲ್.ಡಿ ಬ್ಯಾಂಕಿನಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸಹಕಾರ ರತ್ನ ಪ್ರಶಸ್ತಿ ನೀಡಲಾಗಿದೆ.
ಬೆಂಗಳೂರಿನ ಬ್ಯಾಂಕ್ವೇಟ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ ಈ ಸಂದರ್ಭದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್,ಕಂದಾಯ ಸಚಿವ ಆರ್.ಅಶೋಕ,ನಗರಾಭಿವೃಧ್ಧಿ ಸಚಿವ ಬೈರತಿ ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ:ಜ್ಯೋತಿಷಿ ಮಾತು ಕೇಳಿ ಪತ್ನಿಗೆ ನಿಂದಿಸಿದ ಪತಿ! ಮನನೊಂದು ಆತ್ಮಹತ್ಯೆ ಶರಣಾದ ಗೃಹಿಣಿ
ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ರೈತ ನಾಯಕ ವಿಧಾನ ಪರಿಷತ್ ಮಾಜಿ ಸದಸ್ಯರ ಕೆ.ಬಿ.ಪಿಳ್ಳಪ್ಪನವರ ಪುತ್ರರಾಗಿದ್ದು ಚಿಕ್ಕಬಳ್ಳಾಪುರ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ 15 ವರ್ಷಗಳು ಸೇವೆ ಸಲ್ಲಿಸಿ ಬಳಿಕ ಶಾಸಕರಾಗಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸಹಕಾರ ಸಂಘಗಳನ್ನು ತೆರೆದು ಬಲಪಡಿಸಲು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಉನ್ನತವಾದ ಸಹಕಾರ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದಂತಹ ರಾಜ್ಯ ಸರ್ಕಾರಕ್ಕೆ ಅವರ ಅಪಾರ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಕೆಪಿಬಿಗೆ ಸಹಕಾರ ರತ್ನ ಪ್ರಸ್ತಿಗೆ ಆಯ್ಕೆ ಮಾಡಿದ ವಿಷಯ ತಿಳಿದ ಜೆಡಿಎಸ್ ಜಿಲ್ಲಾದ್ಯಕ್ಷ ಕೆ.ಎಂ.ಮುನೇಗೌಡ,ಜಿಲ್ಲಾ ಪಂಚಾಯಿತಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಾಕಾಂತ್ ಅವರು ಮಾಜಿ ಶಾಸಕರ ಮನೆಗೆ ತೆರಳಿ ಅವರಿಗೆ ಹಾರ ಮೈಸೂರು ಪೇಟ ತೊಡಿಸಿ ಅಭಿನಂದಿಸಿದ್ದಾರೆ.